ನವದೆಹಲಿ: ಯುವಜನರಿಗೆ ಕೌಶಲ ತರಬೇತಿ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಬಹು ಕೌಶಲ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಕೇಂದ್ರ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದರು.

ಮಂಗಳವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುನಿಯಪ್ಪ, ‘ಗ್ರಾಮಾಂತರ ಜಿಲ್ಲೆಯಲ್ಲಿ 45 ಸಾವಿರ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿವೆ. ಈ ಕೈಗಾರಿಕೆಗಳಲ್ಲಿ ಸುಮಾರು ನಾಲ್ಕು ಲಕ್ಷ ಮಂದಿ ಕೆಲಸ ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯ ಯುವಜನರಿಗೆ ಕೌಶಲ ತರಬೇತಿ ಸಿಗುತ್ತಿಲ್ಲ. ಹೀಗಾಗಿ, ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.