ಬೆಂಗಳೂರು: ‘ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಅವರು, ‘ಈ ದುಷ್ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು.ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು
ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

‘ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ, ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂಬುದು ಬಿಜೆಪಿಯ ನಿಲುವು’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.