ಚಿತ್ರದುರ್ಗ: ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿತರಾಗಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾದರು. ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮೂರು ಗಂಟೆಯಲ್ಲಿ ಶರಣರು ಕಾರಾಗೃಹದಿಂದ ಹೊರಬಂದರು.

ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನಿನಲ್ಲಿ ನ.16ರಂದು ಬಿಡುಗಡೆಯಾಗಿದ್ದ ಶಿವಮೂರ್ತಿ ಶರಣರು ನಾಲ್ಕೇ ದಿನಗಳಲ್ಲಿ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದರು. ಶರಣರ ಬಂಧನಕ್ಕೆ ಸೆಷನ್ಸ್ ನ್ಯಾಯಾಲಯ ಹೊರಡಿಸಿದ ವಾರೆಂಟ್, ಬಂಧನ ಹಾಗೂ ಬಿಡುಗಡೆಯ ಬೆಳವಣಿಗೆಗಳು ಇಡೀ ದಿನ ಸಿನೀಮಿಯ ರೀತಿಯಲ್ಲಿ ನಡೆದವು.
.ಎರಡನೇ ಪೋಕ್ಸೊ ಪ್ರಕರಣ; ಮುರುಘಾ ಶರಣರಿಗೆ ಡಿ.2ರವರೆಗೆ ನ್ಯಾಯಾಂಗ ಬಂಧನ.ಎರಡನೇ ಪೋಕ್ಸೊ ಪ್ರಕರಣ: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ಬಂಧನ.
ದಾವಣಗೆರೆಯ ವಿರಕ್ತ ಮಠದಲ್ಲಿ ಶರಣರನ್ನು ಬಂಧಿಸಿದ ಪೊಲೀಸರು ಚಿತ್ರದುರ್ಗಕ್ಕೆ ಕರೆತಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಡಿ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ಶರಣರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಕಾರಾಗೃಹಕ್ಕೆ ಒಪ್ಪಿಸಿದರು. ಸೆಷನ್ಸ್ ಕೋರ್ಟ್ ಹೊರಡಿಸಿದ ವಾರೆಂಟ್ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶಿಸಿದ ಪ್ರತಿ ತಲುಪಿದ ಬಳಿಕ ಶರಣರನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.