ಬೆಂಗಳೂರು: ‘ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ₹1,400 ಕೋಟಿ ಹೂಡಿಕೆ ಮಾಡಲಿದ್ದಾರೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು

ತಮ್ಮನ್ನು ಮಂಗಳವಾರ ಭೇಟಿ ಮಾಡಿದ ಮುತ್ತಯ್ಯ ಅವರ ಜೊತೆ ಸಚಿವರು ಈ ಕುರಿತು ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ‘ಮುರಳೀಧರನ್ ಅವರು ಬದನಕುಪ್ಪೆಯಲ್ಲಿ ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ನಲ್ಲಿ ಉದ್ದಿಮೆ ಆರಂಭಿಸುತ್ತಿದ್ದು, ಆರಂಭದಲ್ಲಿ ₹230 ಕೋಟಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ಅದು ಈಗ ₹1,000 ಕೋಟಿ ತಲುಪುತ್ತಿದೆ. ಮುಂದಿನ ದಿನಗಳಲ್ಲಿ ₹1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಿಳಿಸಿದ್ದಾರೆ’ ಎಂದರು.

‘ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ. ಮುಂಬರುವ ದಿನಗಳಲ್ಲಿ ಧಾರವಾಡದಲ್ಲಿ ಕೂಡ ಮುತ್ತಯ್ಯ ಅವರು ಒಂದು ಘಟಕ ಸ್ಥಾಪಿಸಲಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.