ಬೆಂಗಳೂರು: ಮುಜರಾಯಿ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಸೂಚನೆ ನೀಡಿದೆ.

ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ‘ಶಕ್ತಿ’ ಯೋಜನೆ ಜಾರಿಗೆ ತಂದಿರುವುದರಿಂದ ಮತ್ತು ಬೇಸಿಗೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಇರುವುದರಿಂದ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಮತ್ತು ಯಾತ್ರಿಗಳ ಸಂಖ್ಯೆ ಅಧಿಕ ಇರುತ್ತದೆ. ದೇವರ ದರ್ಶನಕ್ಕಾಗಿ ಬಿಸಿಲಿನಲ್ಲಿ ಅವರು ಸರದಿ ಸಾಲಿನಲ್ಲಿ ನಿಲ್ಲುವಂತಾಗಬಾರದು. ನೆರಳಿನ ವ್ಯವಸ್ಥೆ ಮಾಡಬೇಕು. ಕುಳಿತು ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡಬೇಕು. ಸ್ಥಳಾವಕಾಶ ಇರುವಲ್ಲಿ ತಾತ್ಕಾಲಿಕವಾಗಿ ಪೆಂಡಾಲ್‌ಗಳನ್ನು ಅಳವಡಿಸಬೇಕು.

ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ದಾನಿಗಳು ಮುಂದೆ ಬಂದರೆ ಅವರಿಗೆ ಅವಕಾಶ ನೀಡಬೇಕು. ಬಾರದೇ ಇದ್ದರೆ ದೇವಾಲಯದ ನಿಧಿಯಿಂದಲೇ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.