ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ನಿಲುವು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದಾರೆ.

ದೇವಾಲಯಗಳ ಅನುದಾನಕ್ಕೆ ತಡೆ ನೀಡುವ ಸರ್ಕಾರದ ನಿರ್ಧಾರ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಯತ್ನಾಳ್, ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವುಗಳು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ. ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣದ ನೆಪದಲ್ಲಿ ಕೋಟಿ ಕೋಟಿ ಅನುದಾನ ನೀಡಿದ್ದ ಸರ್ಕಾರ ಈಗ ದೇವಾಲಯಗಳ ಅನುದಾನವನ್ನು ತಡೆಹಿಡಿದಿರುವುದು ಹಿಂದೂ ವಿರೋಧಿ ಧೋರಣೆಯಲ್ಲದೇ ಮತ್ತೇನು’ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ದೇವಾಲಯಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂಬುದು ನನ್ನ ಆಗ್ರಹ ಎಂದು ಬರೆದುಕೊಂಡಿದ್ದಾರೆ.

ಆದೇಶ ವಾಪಸ್: ದೇವಾಲಯಗಳ ಅನುದಾನಕ್ಕೆ ತಡೆ ಆದೇಶವನ್ನು ಹಿಂಪಡೆಯುವಂತೆ ಮುಜರಾಯಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.