ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೆರಿಗೆ ಅನ್ಯಾಯ; ಮತ್ತೆ 'ಹಕ್ಕಿ'ನ ಹೋರಾಟ: ಡಿ.ಕೆ. ಶಿವಕುಮಾರ್

Published : 12 ಅಕ್ಟೋಬರ್ 2024, 10:42 IST
Last Updated : 12 ಅಕ್ಟೋಬರ್ 2024, 10:42 IST
ಫಾಲೋ ಮಾಡಿ
Comments

ಬೆಂಗಳೂರು: ಕಡಿಮೆ ತೆರಿಗೆ ಸಂಗ್ರಹವಾಗುವ ಆಂಧ್ರಪ್ರದೇಶಕ್ಕೆ ಹೆಚ್ಚಿನ ಪಾಲು ಹಂಚಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕೇಂದ್ರದ ಈ ತಾರತಮ್ಯದ ವಿರುದ್ಧ 'ನಮ್ಮ ತೆರಿಗೆ ನಮ್ಮ ಹಕ್ಕು' ಹೋರಾಟ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ’ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಉತ್ತರಪ್ರದೇಶ, ಉತ್ತರ ಭಾರತದ ರಾಜ್ಯಗಳು ಹಾಗೂ ಆಂಧ್ರಪ್ರದೇಶಕ್ಕಿಂತ ಕಡಿಮೆ ಅನುದಾನ ದೊರೆತಿದೆ. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತರಾಮನ್ ಅವರೇ ಹಣಕಾಸು ಸಚಿವರಾಗಿದ್ದಾರೆ. ರಾಜ್ಯದ ನಾಲ್ವರು ಕೇಂದ್ರ ಸಚಿವರಿದ್ದರೂ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ನೋಡಿಕೊಂಡು ಕುಳಿತಿರುವುದು ಆಘಾತಕಾರಿ ಸಂಗತಿ‘ ಎಂದರು.

ಸರಿಯಾಗದ ಅನ್ಯಾಯ:

ರಾಜ್ಯದ ತೆರಿಗೆ ಪಾಲು ಹಂಚಿಕೆ ವಿಚಾರವನ್ನು ಮಾಜಿ ಸಂಸದ ಡಿ.ಕೆ. ಸುರೇಶ್‌ ಸಹ ಪ್ರಸ್ತಾಪಿಸಿ, ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಹಾಗೂ ಮಿತ್ರಪಕ್ಷದ 19 ಸಂಸತ್ ಸದಸ್ಯರು ಕರ್ನಾಟಕದಿಂದ ಆಯ್ಕೆಯಾದರೂ ಮಲತಾಯಿ ಧೋರಣೆ ಮುಂದುರಿದಿದೆ. ದಕ್ಷಿಣ ಭಾತದದ ಅನ್ಯಾಯದ ಬಗ್ಗೆ ಹಿಂದೆ ತಾನು ನೀಡಿದ್ದ ಹೇಳಿಕೆಯನ್ನು ಬಿಜೆಪಿ ತಿರುಚಿತ್ತು. ದೇಶ ವಿಭಜನೆಯ ಮಾತು ಆಡಿದ್ದಾಗಿ ಅಪಪ್ರಚಾರ ನಡೆಸಿತ್ತು. ಆದರೆ, ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸವನ್ನು ಮಾತ್ರ ಮಾಡಲಿಲ್ಲ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT