ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿನ ವೈಭವ ಅದಕ್ಕೆ ಮತ್ತಷ್ಟು ಮೆರುಗು ತುಂಬಿದೆ.

750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಸಾಗುವ ಕ್ಯಾಪ್ಟನ್ ಅರ್ಜುನ ಸಾರಥ್ಯದ ಗಜಪಡೆಯ ವಯ್ಯಾರ ಕಣ್ತುಂಬಿಕೊಳ್ಳುವ ಕಾತರ ಎಲ್ಲರ ಮನದಲ್ಲಿ ಈಗ ಜೋರಾಗಿದೆ.

ನಾಡಹಬ್ಬದ ಪ್ರಧಾನ ಆಕರ್ಷಣೆ ವಿಶ್ವಪ್ರಸಿದ್ಧ ಜಂಬೂಸವಾರಿ ಕ್ಷಣಗಣನೆ ಆರಂಭವಾಗಿದೆ.

ಇಂದು ಮಧ್ಯಾಹ್ನ 2.30ರಿಂದ 3.16ರೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ಮಧ್ಯಾಹ್ನ 3.40ರಿಂದ 4.10ರೊಳಗೆ ಅರಮನೆ ಆವರಣದಲ್ಲಿ ಮೆರವಣಿಗೆಗೆ ಚಾಲನೆ ಸಿಗಲಿದೆ.

ಕೆ.ಆರ್.ವೃತ್ತದ ಮೂಲಕ ಸಯ್ಯಾಜಿರಾವ್ ರಸ್ತೆಯಲ್ಲಿ ಸಾಗಿ 5 ಕಿ.ಮೀ ದೂರವಿರುವ ಬನ್ನಿಮಂಟಪ ತಲುಪಲಿದೆ.

ಧನಂಜಯ ಆನೆ ಇದೇ ಮೊದಲ ಬಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿದೆ. 12 ಆನೆಗಳ ಜೊತೆಗೆ ಅಶ್ವದಳ, ಪೊಲೀಸ್ ವಾದ್ಯವೃಂದ, ಕಲಾ ತಂಡಗಳು, 43 ಸ್ತಬ್ಧಚಿತ್ರಗಳು ಸಾಗಲಿವೆ. 30 ಜಿಲ್ಲೆಗಳಿಂದ ವೈವಿಧ್ಯಮಯ ಪರಿಕಲ್ಪನೆಗಳಲ್ಲಿ ಸ್ತಬ್ಧಚಿತ್ರ ಮೂಡಿಬಂದಿವೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಬರುತ್ತಿದ್ದು, ನಗರದಲ್ಲಿನ ಬಹುತೇಕ ಹೋಟೆಲ್ ಕೊಠಡಿಗಳು ಭರ್ತಿಯಾಗಿವೆ.

ರಾಜಪಥದ ಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಪರದೆ ಅಳವಡಿಸಿ ಮೆರವಣಿಗೆ ನೇರ ಪ್ರಸಾರ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಬಿಗಿ ಬಂದೋಬಸ್ತ್ ಮಾಡಿದ್ದು, ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ‘ಮೊಬೈಲ್ ಕಮಾಂಡ್ ಸೆಂಟರ್’ ವಾಹನವು ಕಣ್ಣಿಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.