ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಕೆ.ಎಂ.ಮಹದೇವನ್ ಅವರ ಜಾಗಕ್ಕೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಕೆ.ಎಂ.ಮಹದೇವನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಬಸಪ್ಪ ಅವರು ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಆಗಿ ನೇಮಕಗೊಳ್ಳುವ ಅರ್ಹತೆ ಹೊಂದಿಲ್ಲ’ ಎಂದು ವಿಶ್ವವಿದ್ಯಾಲಯದ ಕುಲಪತಿ ನೀಡಿರುವ ಅಭಿಪ್ರಾಯವನ್ನು ಪರಿಗಣಿಸಿ ಈ ಆದೇಶ ನೀಡಿದೆ.

‘ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನ ಮುಖ್ಯಮಂತ್ರಿ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಲಾಗಿದೆ. ವಿಶ್ವವಿದ್ಯಾಲಯದ ಪದಾಧಿಕಾರಿಗಳನ್ನು ಸರ್ಕಾರದ ಸಾಮಾನ್ಯ ನೌಕರರ ಮಾದರಿಯಲ್ಲಿ ನೇಮಕ ಮಾಡುವುದು ಮತ್ತು ಹುದ್ದೆಯಿಂದ ತೆಗೆದು ಹಾಕಲು ಅವಕಾಶವಿಲ್ಲ. ವಿಶ್ವವಿದ್ಯಾಲಯದ ಕಾರ್ಯ ನಿರ್ವಹಣಾ ಅಧಿಕಾರಿಗಳನ್ನು ಹಠಾತ್ ಹಾಗೂ ಅನೌಪಚಾರಿಕವಾಗಿ ತೆಗೆದು ಹಾಕಿದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಅವಕಾಶವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.