ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ ಪ್ರಕರಣ | ನಾಗೇಂದ್ರ ಕಸ್ಟಡಿ ಇಂದು ಅಂತ್ಯ

Published 21 ಜುಲೈ 2024, 23:30 IST
Last Updated 21 ಜುಲೈ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ), ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಈ ಪ್ರಕರಣದಲ್ಲಿ ಜುಲೈ 12ರಂದು ನಾಗೇಂದ್ರ ಅವರನ್ನು ಇ.ಡಿ ಬಂಧಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಬೇಕು ಎಂದು ಇ.ಡಿ ಕೋರಿದ್ದ ಕಾರಣ, ನ್ಯಾಯಾಲಯವು ಜುಲೈ 22ರವರೆಗೆ ಕಸ್ಟಡಿ ವಿಸ್ತರಿಸಿತ್ತು.

ಸೋಮವಾರ ನಾಗೇಂದ್ರ ಅವರ ಕಸ್ಟಡಿ ಅವಧಿ ಅಂತ್ಯವಾಗಲಿದೆ. ಅವರ ಕಸ್ಟಡಿ ವಿಸ್ತರಿಸುವಂತೆ ಇ.ಡಿ ಮತ್ತೆ ನ್ಯಾಯಾಲಯವನ್ನು ಕೋರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT