ಬೆಂಗಳೂರು: ರಾಜ್ಯದಲ್ಲಿರುವ ಉದ್ಯಮಗಳು ತಯಾರಿಸುವ ಉತ್ಪನ್ನಗಳ ಮೇಲೆ ಇಂಗ್ಲಿಷ್ನಲ್ಲಿ ಮಾತ್ರ ಹೆಸರು ಮುದ್ರಿತವಾಗಿರುತ್ತದೆ. ಇನ್ನು ಮುಂದೆ ಕನ್ನಡದಲ್ಲೂ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಶುಕ್ರವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯೋತ್ಸವ ಹಾಗೂ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಮೈಸೂರು ಜಿಲ್ಲಾಧಿಕಾರಿ ಕಚೇರಿಯಿದ್ದ ಕಟ್ಟಡವನ್ನು ನಾವು ಅಠಾರ ಎಂದು ಕರೆಯುತ್ತೇವೆ. ಅ ಕಟ್ಟಡದಲ್ಲಿ ‘ಕನ್ನಡ ಸಂಗ್ರಹಾಲಯ’ವನ್ನು ಸರ್ಕಾರ ಸ್ಥಾಪಿಸಲಿದೆ’ ಎಂದು ಅವರು ಹೇಳಿದರು.

‘ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು. ಬೇರೆ ಯಾವ ರಾಜ್ಯದಿಂದ ಜನರ ಬಂದರೂ ಅವರಿಗೆ ಕನ್ನಡ ಕಲಿಸಬೇಕು. ಅವರು ಕನ್ನಡದಲ್ಲೇ ಮಾತನಾಡಿ ವ್ಯವಹಾರ ಮಾಡುವಂತೆ ಮಾಡಬೇಕು. ಸರ್ಕಾರ ಇಂತಹ ಕೆಲಸ ಮಾಡಲಿದ್ದು, ನಾಗರಿಕರೂ ಎಲ್ಲರಿಗೂ ಕನ್ನಡ ಕಲಿಸುತ್ತೇವೆ ಎಂದು ಪ್ರಮಾಣ ಮಾಡಬೇಕು’ ಎಂದು ಹೇಳಿದರು.

‘ಕರ್ನಾಟಕ ಎಂದು ಮರುನಾಮಕರಣವಾಗಿ 51 ವರ್ಷ ತುಂಬಿದೆ. 50 ವರ್ಷ ಆದಾಗಲೇ ಸಮಾರಂಭ ಮಾಡಬೇಕಿತ್ತು. ಬಿಜೆಪಿ ಸರ್ಕಾರ ಮಾಡಲಿಲ್ಲ. ಆದ್ದರಿಂದ, ನಾವು ಬಜೆಟ್ನಲ್ಲಿ ಘೋಷಿಸಿ ವರ್ಷಪೂರ್ತಿ ಸುವರ್ಣ ಮಹೋತ್ಸವ ಆಚರಿಸಿದ್ದೇವೆ’ ಎಂದರು.

‘ರಾಜ್ಯೋತ್ಸವ, ಸುವರ್ಣ ಪ್ರಶಸ್ತಿ ಸಂದಿರುವುದು ನಿಮ್ಮ ಸಾಧನೆಗಳಿಂದ. ನಾಡು, ಜಲ, ನೆಲ, ಸಂಸ್ಕೃತಿ ನಾಡಿಗೆ ನೀವು ನೀಡಿರುವ ಕೊಡುಗೆಗಳನ್ನು ಗುರುತಿಸಿ ನೀಡಲಾಗಿದೆ. ನಿಮಗೆ ಪ್ರಶಸ್ತಿ ಪ್ರದಾನ ಮಾಡುವುದರೊಂದಿಗೆ ಸರ್ಕಾರ ತನ್ನನ್ನು ತಾನೂ ಗೌರವಿಸಿಕೊಂಡಿದೆ. ನೀವು ಇನ್ನೂ ಹೆಚ್ಚಿನ ಸಾಧನೆ ಮಾಡಿ, ಎಲ್ಲರಿಗೂ ಮಾದರಿ ಆಗಿ’ ಎಂದು ಕರೆ ನೀಡಿದರು.

ಶಾಲೆಗಳಲ್ಲಿ ಧ್ವಜಾರೋಹಣ: ‘ಮುಂದಿನ ವರ್ಷದಿಂದ ಬೆಂಗಳೂರು ನಗರದಲ್ಲಿರುವ ಎಲ್ಲ ಶಾಲೆ– ಕಾಲೇಜುಗಳಲ್ಲಿ ಕನ್ನಡ ಧ್ವಜವನ್ನು ಹಾರಿಸಿ ರಾಜ್ಯೋತ್ಸವ ಆಚರಿಸುವುದನ್ನು ಕಡ್ಡಾಯಗೊಳಿಸಲಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಈ ವರ್ಷವೇ ಶಾಲೆಗಳಿಗೆ ಸೂಚನೆ ನೀಡಲಾಯಿತು. ಹಲವರು ಆಚರಿಸಿದ್ದಾರೆ. ಮುಂದಿನ ವರ್ಷ ಎಲ್ಲರಿಗೂ ಕಡ್ಡಾಯವಾಗಲಿದೆ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿ,
‘ಭುವನೇಶ್ವರಿ ಪ್ರತಿಮೆಯನ್ನು ನವೆಂಬರ್ ಅಂತ್ಯದೊಳಗೆ ಅನಾವರಣಗೊಳಿಸಲಾಗುತ್ತದೆ. ರಾಜ್ಯೋತ್ಸವದ ದಿನವಾದ ಇಂದೇ ಪ್ರತಿಮೆ ಉದ್ಘಾಟನೆ ಆಗಬೇಕಿತ್ತು. ಆದರೆ ಪ್ರತಿಮೆ ಸಂಪೂರ್ಣ ಸಿದ್ಧವಾಗಿಲ್ಲ. ಆದ್ದರಿಂದ, ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡು ಕಾರ್ಯಕ್ರಮವನ್ನು ಮುಂದೂಡಿದ್ದೇವೆ’ ಎಂದರು.

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ 50 ಮಹಿಳೆಯರು, 50 ಪುರುಷರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ‘ಇಂತಹ ಅಭೂತಪೂರ್ವ ಸಮಾರಂಭ ರಾಜ್ಯದ ಇತಿಹಾಸದಲ್ಲೇ ನಡೆದಿಲ್ಲ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ.ಪರಮೇಶ್ವರ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.