ಬೆಂಗಳೂರು: ವಿಜಯಪುರ ಜಿಲ್ಲೆಯ 1,494.38 ಎಕರೆ ಒಳಗೊಂಡ ಮಮದಾಪುರ ಅರಣ್ಯಪ್ರದೇಶಕ್ಕೆ ‘ಶ್ರೀಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ’ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜ.2ರಂದು ವಿಜಯಪುರದಲ್ಲಿ ನೂತನ ಹೆಸರಿನ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

‘ವಿಜಯಪುರ, ಬಾಗಲಕೋಟೆ ಭಾಗದಲ್ಲಿ ಅರಣ್ಯ ಪ್ರದೇಶವೇ ಕಡಿಮೆ ಇದ್ದು, ಈಗಿರುವ ಪ್ರದೇಶ ಹಾಗೂ ಇಲ್ಲಿನ ಜೀವ ವೈವಿಧ್ಯತೆಯನ್ನು ಸಂರಕ್ಷಿಸಲಾಗುವುದು. ಜೀವವೈವಿಧ್ಯ ಕಾಯಿದೆ 2022ರ ಸೆಕ್ಷನ್ 37ರ ಅನ್ವಯ ಮರುನಾಮಕರಣ ಮಾಡಲಾಗುವುದು. ಶ್ರೀಗಳ ಹೆಸರಿಟ್ಟರೆ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲು ನೆರವಾಗಲಿದೆ. ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.