ನವದೆಹಲಿ: ‘ತುಮಕೂರು ರೈಲು ನಿಲ್ದಾಣದ ಅಭಿವೃದ್ಧಿಗೆ ₹82 ಕೋಟಿ ಮಂಜೂರಾಗಿದೆ. ಈ ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೆಸರನ್ನು ಇರಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಪ್ರಧಾನಿ ಅವರನ್ನು ಮಂಗಳವಾರ ಭೇಟಿ ಮಾಡಿದ ಸೋಮಣ್ಣ ಸುಮಾರು 30 ನಿಮಿಷ ಚರ್ಚಿಸಿದರು. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದ ರೈಲ್ವೆ ಅಭಿವೃದ್ಧಿ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.

ತುಮಕೂರು– ರಾಯದುರ್ಗ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಯು ಮೂರು ತಿಂಗಳಲ್ಲಿ ಶೇ 90ರಷ್ಟು ಪೂರ್ಣಗೊಂಡಿದೆ. ಮೂರು ತಿಂಗಳಲ್ಲಿ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈಲ್ವೆಯ ಪ್ರಗತಿ ಪರಿಶೀಲನೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತು ಕೆಲವು ವಿಶೇಷ ಪ್ರಸ್ತಾವನೆಗಳನ್ನು ನೀಡಿದ ಅವರು ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಪ್ರಧಾನಿ ಅವರಿಗೆ ಕೋರಿದರು.

ತುಮಕೂರು – ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗವನ್ನು 2027ರ ಜೂನ್ನಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.