ಬೆಂಗಳೂರು: ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.

ಈ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹1.50ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು. ಗ್ರಾಹಕರಿಂದ ಬೆಲೆ ಏರಿಕೆಗೆ ಅಸಮಾಧಾನ ವ್ಯಕ್ತವಾಗಿದ್ದರಿಂದ ಕೆಎಂಎಫ್ ಈ ಕ್ರಮ ಕೈಗೊಂಡಿದೆ.

ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ₹10.50ಕ್ಕೆ ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ.

200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.

ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ.

ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ ‘ನಂದಿನಿ’ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರುಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಸರು, ಲಸ್ಸಿ, ಮಜ್ಜಿಗೆ ದರ ಏರಿಕೆ: ₹1ರಿಂದ ₹3 ರಷ್ಟು ಹೆಚ್ಚಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.