ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊಮ್ಮಘಟ್ಟದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಜ್ಯದಲ್ಲಿ ಈಗಾಗಲೇ ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ಸಾರ್ವಜನಿಕರ ಸೇವೆಗೆ ಅರ್ಪಿಸಿದರು. ಇನ್ನೂ ಹಲವು ಹೊಸ ಯೋಜನೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಆ ಎಲ್ಲ ಯೋಜನೆಗಳ ವಿವರ ಈ ಕೆಳಗಿದೆ...

ಉದ್ಘಾಟನೆಯಾದ ಯೋಜನೆಗಳು

l ₹ 1,287 ಕೋಟಿ ವೆಚ್ಚದಲ್ಲಿ ಸಂಪೂರ್ಣ ವಿದ್ಯುದ್ದೀಕರಣಗೊಂಡಿರುವ ಕೊಂಕಣ ರೈಲ್ವೆ ಮಾರ್ಗ.

l ₹ 314 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಂಪೂರ್ಣ ಹವಾನಿಯಂತ್ರಿತ ಸರ್. ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್.

l ₹ 758 ಕೋಟಿ ವೆಚ್ಚದ ಅರಸೀಕೆರೆ– ತುಮಕೂರು ಜೋಡಿ ರೈಲು ಮಾರ್ಗ ಮತ್ತು ಹೊಸ ರೈಲುಗಳ ಸೇವೆ.

l ₹ 1,104 ಕೋಟಿ ವೆಚ್ಚದ ಯಲಹಂಕ– ಪೆನುಕೊಂಡ ಜೋಡಿ ರೈಲು ಮಾರ್ಗ ಮತ್ತು ಹೊಸ ರೈಲುಗಳ ಸೇವೆ.

ಶಂಕುಸ್ಥಾಪನೆ ನೆರವೇರಿಸಿದ ಯೋಜನೆಗಳು

l ₹ 15,767 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆ.

l ₹ 470 ಕೋಟಿ ವೆಚ್ಚದಲ್ಲಿ ಬೆಂಗಳೂರು ದಂಡು ರೈಲ್ವೆ ನಿಲ್ದಾಣದ ಅಭಿವೃದ್ಧಿ.

l ₹ 400 ಕೋಟಿ ವೆಚ್ಚದಲ್ಲಿ ಯಶವಂತಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿ.

l ಒಟ್ಟು ₹ 7,231 ಕೋಟಿ ವೆಚ್ಚದಲ್ಲಿ ಎರಡು ಪ್ಯಾಕೇಜ್‌ಗಳಲ್ಲಿ ಬೆಂಗಳೂರು ವರ್ತುಲ ರಸ್ತೆ ಕಾಮಗಾರಿ, ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ ಷಟ್ಪಥ ರಸ್ತೆ ನಿರ್ಮಾಣ ಯೋಜನೆ, ರಾಷ್ಟ್ರೀಯ ಹೆದ್ದಾರಿ 73ರ ಪೂಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ವಿಸ್ತರಣೆ, ರಾಷ್ಟ್ರೀಯ ಹೆದ್ದಾರಿ 69ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ರಸ್ತೆಯ ವಿಸ್ತರಣೆ ಹಾಗೂ ಉನ್ನತೀಕರಣ. ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.