ಬೆಂಗಳೂರು: ವಿಧಾನಸೌಧದಲ್ಲಿ 'ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಸೀರ್ ಹುಸೇನ್ ಆಯ್ಕೆಯಾಗಿದ್ದರು. ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದರು.
.ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿ: ಶ್ರೀರಾಮುಲು.ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ: ನಾಶಿಪುಡಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ.
ಇದು ಎಫ್ಎಸ್ಎಲ್ ವರದಿಯಲ್ಲೂ ಸಹ ದೃಢಪಟ್ಟಿದ್ದು, ಈ ಸಂಬಂಧ ಪೊಲೀಸರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.

'ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಹಿಂದೆ ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.