ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ರಾಷ್ಟ್ರೀಯ ಸ್ವರಾಜ್ ಸಮ್ಮೇಳನ’ ನ. 13, 14ಕ್ಕೆ: ಪ್ರಿಯಾಂಕ್ ಖರ್ಗೆ

Published : 3 ಅಕ್ಟೋಬರ್ 2024, 19:18 IST
Last Updated : 3 ಅಕ್ಟೋಬರ್ 2024, 19:18 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯದಲ್ಲಿ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ಕಾಯ್ದೆ ಜಾರಿಗೆ ಬಂದು ಮೂರು ದಶಕ ತುಂಬಿದ ನೆನಪಿಗಾಗಿ ನ. 13 ಮತ್ತು 14ರಂದು ‘ರಾಷ್ಟ್ರೀಯ ಸ್ವರಾಜ್ ಸಮ್ಮೇಳನ’ ಆಯೋಜಿಸಲು ಉದ್ದೇಶಿಸಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಪಂಚಾಯತ್‌ ವ್ಯವಸ್ಥೆ ನಡೆದುಬಂದ ಹಾದಿಯ ಕುರಿತು ಅವಲೋಕನ ಮತ್ತು ಮುಂದಿನ 30 ವರ್ಷಗಳಿಗೆ ಅನ್ವಯವಾಗುವಂತೆ ಕರ್ನಾಟಕ ಸ್ವರಾಜ್ಯ ಸನ್ನದು ರೂಪಿಸುವ ಕುರಿತು ವಿಚಾರಸಂಕಿರಣ, ದುಂಡುಮೇಜಿನ ಪರಿಷತ್ತು, ಕಾರ್ಯಾಗಾರ, ಸಂವಾದ, ಚರ್ಚಾಗೋಷ್ಠಿಗಳನ್ನು ಈ ಎರಡೂ ದಿನ ಹಮ್ಮಿಕೊಳ್ಳಲಾಗುವುದು’ ಎಂದರು.

‘ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಸಾಮಾಜಿಕ, ಆರ್ಥಿಕ, ಕಾನೂನು, ಆಡಳಿತ, ಸಂವಿಧಾನ ಹಾಗೂ ವಿಷಯ ತಜ್ಞರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುವುದು. ಈ ಗೋಷ್ಠಿಗಳ ನಂತರ ಹೊಮ್ಮುವ ವಿಚಾರಗಳನ್ನು ಆಧರಿಸಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ದೇಶದ ಪಂಚಾಯತಿ ವ್ಯವಸ್ಥೆಯಲ್ಲಿ ತರಬಹುದಾದ ಮತ್ತಷ್ಟು ಸುಧಾರಣೆಗಳನ್ನು ಸೂಚಿಸುವ ನೀಲನಕ್ಷೆಯನ್ನು ರೂಪಿಸಲಾಗುವುದು. ಸಮ್ಮೇಳನದಲ್ಲಿ ತೆಗೆದುಕೊಳ್ಳುವ ಮಹತ್ವದ ನಿರ್ಧಾರಗಳನ್ನು ‘ಕರ್ನಾಟಕ ಪಂಚಾಯತ್‌ ರಾಜ್‌ ಘೋಷಣೆʼ ಎಂದು ಪರಿಗಣಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT