ಬೆಂಗಳೂರು: ‘ಇದೇ 12ರಿಂದ 16ವರಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಉತ್ಸವದ ಲಾಂಛನ ಮತ್ತು ಮ್ಯಾಸ್ಕಟ್ ಅನ್ನು ಮುಖ್ಯಮಂತ್ರಿ ಶನಿವಾರ ಬಿಡುಗಡೆ ಮಾಡಿದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ವರ್ಚುವಲ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

‘ವಿಕಸಿತ್ ಯುವ- ವಿಕಸಿತ್ ಭಾರತ್’ ಎಂಬ ವಿಷಯದಡಿ ನಡೆಯಲಿರುವ ಈ ಉತ್ಸವವನ್ನು ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇದೇ 12ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಉದ್ಘಾಟಿಸಲಿದ್ದಾರೆ. ಉತ್ಸವದಲ್ಲಿ ದೇಶದ ವಿವಿಧೆಡೆಯಿಂದ ಸುಮಾರು 7,500 ಜನರು ಭಾಗವಹಿಸುವ ನಿರೀಕ್ಷೆಯಿದೆ.

ಲಾಂಛನ: ಒಡಿಶಾದ ಬನ್ಸಿಲಾಲ್ ಕೇತ್ಕಿ ರೂಪಿಸಿದ ಲಾಂಛನವನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೆ ₹ 50 ಸಾವಿರ ಬಹುಮಾನ ದೊರೆಯಲಿದೆ. ಈ ಲಾಂಛನ ಭಾರತದ ರಾಷ್ಟ್ರೀಯ ಪುಷ್ಪವಾದ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆಯ ನಡುವೆಯೂ ಇರುವ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ವಿದೇಶಾಂಗ ವ್ಯವಹಾರ ಹಾಗೂ ಸೇನಾಬಲದಲ್ಲಿ ಭಾರತದ ಉನ್ನತಿಯನ್ನು ಬಿಂಬಿಸುವ ಜೊತೆಗೆ, ಜಿ20 ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನೂ ಅಭಿವ್ಯಕ್ತಿಸುತ್ತದೆ.

‘ಚಂಪಿ ಚಿಕ್ಕ’: ಬೆಂಗಳೂರಿನ ಇನ್ಬಂ ಅವರು ರೂಪಿಸಿದ ‘ಚಂಪಿ ಚಿಕ್ಕ’ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ ₹ 50 ಸಾವಿರ ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸವನ್ನು ಹೊಂದಿದ್ದು, ಕರ್ನಾಟದಲ್ಲಿ ಅತಿ ಹೆಚ್ಚಿರುವ ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ. ಜೊತೆಗೆ ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿಯ ಜೊತೆಗೆ ಕ್ರೀಡೆ, ಸ್ಟಾರ್ಟ್ಅಪ್, ನಾವಿನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.

ಲಾಂಛನ ಬಿಡುಗಡೆಯ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಯುವಜನ ಉತ್ಸವ ಸಮಿತಿಯ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವಜನೋತ್ಸವ ಯಶಸ್ವಿಗೊಳಿಸುವ ಕುರಿತಂತೆ ಉದ್ಘಾಟನೆ, ಸಿದ್ದತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ನಟಿ ತಾರಾ ಅನೂರಾಧ, ಯುವಜನ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಕೂಡಾ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.