ಬೆಂಗಳೂರು: ‘ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಡಿ ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಸಾವಿತ್ರಿ ವಿರುದ್ಧ ಬಾಡಿ ವಾರಂಟ್ ಜಾರಿಗೊಳಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯನ್ನು ಮರು ಪರಿಶೀಲಿಸಿ’ ಎಂದು ಬೆಳ್ತಗಂಡಿಯ ಜೆಎಂಎಫ್ಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಬೆಳ್ತಂಗಡಿಯ ವೇಣೂರು ಠಾಣಾ ಪೊಲೀಸರು ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್, ‘ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಮೂಡಿಗೆರೆ ತಾಲ್ಲೂಕಿನ ಜಾರಿಮನೆಯ ಸಾವಿತ್ರಿ ಅಲಿಯಾಸ್ ಉಷಾ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಆಕೆ ಕೇರಳದ ತ್ರಿಶ್ಶೂರ್ ಜೈಲಿನಲ್ಲಿದ್ದಾರೆ. ಆದರೆ, 2012ರಲ್ಲಿ ಬೆಳ್ತಂಗಡಿಯ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಸಾವಿತ್ರಿ ವಿರುದ್ಧ ಬಾಡಿ ವಾರಂಟ್ ಜಾರಿಗೊಳಿಸುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಳ್ತಂಗಡಿ ವಿಚಾರಣಾ ನ್ಯಾಯಾಲಯ 2022ರ ಜೂನ್ನಲ್ಲಿ ವಜಾಗೊಳಿಸಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನು ಪುರಸ್ಕರಿಸಿದ ನ್ಯಾಯಪೀಠ, ‘ಪೊಲೀಸರ ಮನವಿಯನ್ನು ಮರು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ’ ಎಂದು ಪ್ರಕರಣವನ್ನು ಬೆಳ್ತಂಗಡಿಯ ಎಸಿಜೆ ಮತ್ತು ಜೆಎಂಎಫ್ಸಿ ಕೋರ್ಟ್ಗೆ ಹಿಂದಿರುಗಿಸಿತು. ಅಂತೆಯೇ ಎರಡೂ ಅರ್ಜಿಗಳನ್ನು ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.