ಮಂಗಳವಾರ, 24 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯಗೆ ಎದುರಾಗಿರುವ ಸವಾಲು ಎದುರಿಸಲು ಅಗತ್ಯ ಸಿದ್ಧತೆ: ಸಂಸದ ಹಿಟ್ನಾಳ

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ
Published : 24 ಸೆಪ್ಟೆಂಬರ್ 2024, 9:10 IST
Last Updated : 24 ಸೆಪ್ಟೆಂಬರ್ 2024, 9:10 IST
ಫಾಲೋ ಮಾಡಿ
Comments

ಕೊಪ್ಪಳ: ರಾಜ್ಯ ಹೈಕೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ 'ಈ ಸವಾಲು ಎದುರಿಸಲು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಅಗತ್ಯ ಸಿದ್ದತೆ ಮಾಡಿಕೊಂಡಿದೆ' ಎಂದರು‌.

ಹೈಕೋರ್ಟ್ ಆದೇಶವನ್ನು ಗೌರವಿಸುತ್ತೇನೆ. ಆದರೆ ನಮಗೆ ಇನ್ನೂ ಅವಕಾಶ ಇದೆ. ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಸರ್ಕಾರದ ಹಣ ದುರ್ಬಳಕೆ ಆಗಿದ್ದರೆ ರಾಜೀನಾಮೆ ಕೇಳಬಹುದಿತ್ತು. ಇದರಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ಸರ್ಕಾರದ ಅಧಿಕಾರದಲ್ಲಿ ಇದ್ದಾಗ ಮುಡಾ ನಿವೇಶನ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹೆಸರು ಹಾಳು ಮಾಡುವ ಬಿಜೆಪಿ ಹುನ್ನಾರದಿಂದಾಗಿ ಇಷ್ಟೆಲ್ಲ ಆಗುತ್ತಿದೆ ಎಂದು ಆರೋಪಿಸಿದರು.

ನ್ಯಾಯಾಲಯದ ತೀರ್ಪಿನಿಂದಾಗಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು.

ಪ್ರತಿಭಟನೆಗೆ ಬಿಜೆಪಿ ಸಜ್ಜು: ಹೈಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ‌ನಡೆಸಲು ಮುಂದಾಗಿದೆ.

ಮಂಗಳವಾರ (ಇಂದು) ಸಂಜೆ 4 ಗಂಟೆಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಜರುಗಲಿದ್ದು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕ ತನ್ನ ಕಾರ್ಯಕರ್ತರಿಗೆ ಸಂದೇಶ ಕಳುಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT