ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಸಿಗದೆ, ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೊದಲ ವರ್ಷದಲ್ಲಿ ₹25 ಲಕ್ಷ ಕಾಲೇಜು ಶುಲ್ಕ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅಲ್ಲದೆ, ಹೀಗೆ ಪ್ರವೇಶ ಪಡೆದ ವಿದ್ಯಾರ್ಥಿ ಎಂಬಿಬಿಎಸ್ ಮೊದಲ ವರ್ಷದಲ್ಲಿ ಶೇ 60ಕ್ಕೂ ಹೆಚ್ಚು ಅಂಕ ಪಡೆದರೆ ಮತ್ತೆ ₹25 ಲಕ್ಷ ಪ್ರೋತ್ಸಾಹಧನ ಸಿಗಲಿದೆ. ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡಲಾಗುವ ಪ್ರೋತ್ಸಾಹಕ ಧನವನ್ನು ₹1 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಿ 2018ರಲ್ಲಿಯೇ ಆದೇಶ ಹೊರಡಿಸಲಾಗಿತ್ತು. ಆಡಳಿತ ಮಂಡಳಿಯ ಕೋಟಾದಡಿ ವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಮತ್ತು ಪ್ರೋತ್ಸಾಹಧನ ನೀಡುವ ಅಂಶವನ್ನೂ ಸೇರಿಸಿ ಅ. 24ರಂದು ಆದೇಶ ಹೊರಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ.

ಪಿಯುಸಿ ಪರೀಕ್ಷೆಯಲ್ಲಿ ಶೇ 95ಕ್ಕೂ ಹೆಚ್ಚು ಅಂಕ ಪಡೆದು, ನೀಟ್ನಲ್ಲಿ ಅರ್ಹತೆ ಪಡೆದರೂ ಆಡಳಿತ ಮಂಡಳಿಯ ಕೋಟಾದಡಿ ಕಾಲೇಜು ಶುಲ್ಕ ಕಟ್ಟಲು ಸಾಧ್ಯವಾಗದೆ ಕೆಲವು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಅಲವತ್ತುಕೊಂಡಿದ್ದ ವಿದ್ಯಾರ್ಥಿಗಳು, ಕಾಲೇಜು ಶುಲ್ಕ ಕಟ್ಟಲು ಹಣಕಾಸಿನ ನೆರವು ನೀಡುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.