ಬೆಂಗಳೂರು: ನೆಹರೂ ಯುವ ಕೇಂದ್ರ ಸಂಘಟನೆ ವತಿಯಿಂದ ಡಿ. 1 ಮತ್ತು 2 ರಂದು ‘ಯುವ ಉತ್ಸವ ಇಂಡಿಯಾ@2047’ ಎಂಬ ರಾಜ್ಯಮಟ್ಟದ ಯುವ ಉತ್ಸವವನ್ನು ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ದಕ್ಷಿಣ ರಾಜ್ಯಗಳ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಾದ್ಯಂತ ನಡೆದ ಜಿಲ್ಲಾಮಟ್ಟದ ಉತ್ಸವಗಳಲ್ಲಿ ಆಯ್ಕೆಯಾದ 31 ಜಿಲ್ಲೆಗಳ 550 ಯುವಜನರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಚಿತ್ರಕಲೆ ಸ್ಪರ್ಧೆ, ಕವನ ರಚನಾ ಸ್ಪರ್ಧೆ, ಫೋಟೊಗ್ರಫಿ ಸ್ಪರ್ಧೆ, ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕೇಂದ್ರ ಸಚಿವ ಭಗವಂತ ಖೂಬಾ ಅವರು ಉತ್ಸವವನ್ನು ಉದ್ಘಾಟಿಸಿಲಿದ್ದಾರೆ. ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಶಾಸಕ ರಿಜ್ವಾನ್ ಅರ್ಷದ್, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಭಾಗವಹಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.