‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಅವರನ್ನು ವೈಭವೀಕರಿಸುವುದನ್ನು ನಾನು ಒಪ್ಪುವುದಿಲ್ಲ’ ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಹುಬ್ಬಳ್ಳಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಭಾರತ ಹಾಗೂ ಹಿಂದೂ ಧರ್ಮದ ಕುರಿತು ಅವರಿಗೆ ಇದ್ದ ಆಲೋಚನೆಗಳನ್ನು ಮಾತ್ರ ನಾವು ಸಂಭ್ರಮಿಸಬಹುದು’ ಎಂದರು. ಇನ್ನು, ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಾಗಿದೆ. ಎಫ್ಐಆರ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿಲ್ಲ. ಇದರೊಂದಿಗೆ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.