ಬೆಳಗಾವಿ: ‘ಪ್ರವಾಹ ಬಾಧಿತ ಪ್ರದೇಶ ಗಳಲ್ಲಿ ಮುಳುಗಡೆಯಾಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರ ನೀಡುವಂತೆ ವಿಮಾ ಕಂಪನಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

‘ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬೆಳೆ ವಿಮಾ ಕಂಪನಿಗಳು ಹಾಗೂ ರೈತರ ಪ್ರವಾಹ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಬೇಕು. ಮುಳುಗಡೆಯಾಗಿರುವ ಬೆಳೆಯ ಸಮೀಕ್ಷೆಗೆ ಮುಂದಾಗದೇ, ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸುವಂತೆ ಸೂಚಿಸಲಾಗುವುದು’ ಎಂದು ಹೇಳಿದರು.

ವಿಮೆ ಅವಧಿ ವಿಸ್ತರಣೆ: ‘ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿಬೆಳೆ ವಿಮೆ ಕಂತು ಪಾವತಿಸುವ ಅವಧಿಯನ್ನು ವಿಸ್ತರಿಸುವಂತೆ ಸಮೀಕ್ಷೆ ವೇಳೆ ರೈತರು ಮನವಿ ಮಾಡಿದ್ದಾರೆ. ವಿಮೆ ಕಂತು ಪಾವತಿಸಲು ಆಗಸ್ಟ್ 15 ಕೊನೆಯ ದಿನವಾಗಿತ್ತು. ಅದನ್ನು ವಿಸ್ತರಣೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದಾಗ ಪ್ರವಾಹದಿಂದ ನೇಕಾರರ ಕುಟುಂಬಗಳು ಸಂಕಷ್ಟಕ್ಕೀಡಾಗಿರುವುದು ಕಂಡುಬಂದಿದೆ. ನೇಕಾರರ ಮಗ್ಗಗಳು ಮತ್ತು ಕಚ್ಚಾ ವಸ್ತುಗಳು ಪ್ರವಾಹದಿಂದ ಹಾನಿ ಯಾಗಿವೆ. ಸಂತ್ರಸ್ತರು ತೊಂದರೆಯಲ್ಲಿದ್ದಾರೆ. ಹೀಗಾಗಿ, ನೇಕಾರರು ಹಾಗೂ ಸಂತ್ರಸ್ತರಿಗೆ ಮೈಕ್ರೋ ಫೈನಾನ್ಸ್‌ಗಳು ಸಾಲ ಪಾವತಿಸುವಂತೆ ಕಿರುಕುಳ ಕೊಡ ಬಾರದು. ಈ ಬಗ್ಗೆ ಸರ್ಕಾರದಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು’ ಎಂದು ಹೇಳಿದರು.

‘ವೈಮಾನಿಕ ಸಮೀಕ್ಷೆ ನಡೆಸಿ ದಾಗ ಪ್ರವಾಹ ತೀವ್ರವಾಗಿರುವುದು ಕಂಡು ಬಂದಿದೆ. ಕೃಷ್ಣಾ, ಘಟ ಪ್ರಭಾ ಮತ್ತು ಮಲಪ್ರಭಾ ನದಿ ತೀರದ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಅನೇಕ ಸೇತುವೆಗಳು ಮುಳುಗಡೆಯಾಗಿದ್ದು, ಜನ-ಜಾನುವಾರುಗಳಿಗೆ ಅಪಾಯವಿದೆ’ ಎಂದರು.

ಇನ್ನಷ್ಟು...

* ಕಡಲಾಯ್ತು ದಕ್ಷಿಣ, ಜನ ಹೈರಾಣ

* ರಸ್ತೆ ಬಂದ್; ದುಬಾರಿಯಾಯಿತು ವಿಮಾನ ಪ್ರಯಾಣ

* ಪ್ರವಾಹ, ಭೂಕುಸಿತಕ್ಕೆ 106 ಬಲಿ

* ಸಂಪರ್ಕ ಕಡಿತ: ಗೂಗಲ್ ಅಪ್ಡೇಟ್

* ಇಳಿದು ಹೋಗಮ್ಮ ಕಾವೇರಿ ತಾಯಿ...

* ಗಂಗಾವಳಿ ಪ್ರವಾಹ; ಹೆದ್ದಾರಿಯಲ್ಲೇ ಜೀವನ

* ಸಿಗದ ಸಂಪರ್ಕ: ಕವಿದ ಆತಂಕ

* ಉಕ್ಕಿದ ನದಿ, ಸಂಕಷ್ಟದಲ್ಲಿ ಜನ–ಜಾನುವಾರು

* ಮಲೆನಾಡಿನಲ್ಲಿ ಭಾರಿ ಮಳೆ: ಪೆಟ್ರೋಲ್; ಡೀಸೆಲ್ ಕೊರತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.