ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ಈಗ ಜಾರಿಯಲ್ಲಿರುವ ನಿಯಮಾವಳಿಗಳನ್ನೇ ಮುಂದುವರಿಸಲಾಗುತ್ತದೆ. ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸ್ಪಷ್ಟಪಡಿಸಿದೆ.

ಮನೆಯಲ್ಲಿ ಬೈಕ್, ಟಿ.ವಿ. ರೆಫ್ರಿಜರೇಟರ್ ಮತ್ತು ಹೆಚ್ಚು ಭೂಮಿ ಹೊಂದಿದವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಬೆಳಗಾವಿಯಲ್ಲಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದ್ದಂತೆ 2016 ಮತ್ತು 2017 ರಲ್ಲಿ ಮಾಡಿದ ಆದೇಶವನ್ನೇ ಪಾಲಿಸಲಾಗುತ್ತದೆ. ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದಿದ್ದಾರೆ.

ಸಚಿವರು ಹೇಳಿದ್ದೇನು?

ಟಿ.ವಿ. ರೆಫ್ರಿಜರೇಟರ್, ಬೈಕ್, ಹೆಚ್ಚು ಜಮೀನು ಹೊಂದಿರುವವರು. ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ₹1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಅಂತಹವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕೂಡಲೇ ಅದನ್ನು ಮರಳಿಸಬೇಕು. ಇದಕ್ಕೆ ಮಾರ್ಚ್ 31 ಗಡುವು ನಿಗದಿ ಮಾಡಲಾಗಿದೆ ಎಂದು ಹೇಳಿದ್ದರು.

ಮುಂಬರುವ ದಿನಗಳಲ್ಲಿ ಸಮೀಕ್ಷೆ ನಡೆಸಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆ ಮಾಡಿ ರದ್ದು ಮಾಡುವುದಾಗಿ ಹೇಳಿದ್ದರು.

ಶಾಸಕ ಯು.ಟಿ.ಖಾದರ್ ಮತ್ತು ಇತರರು ಸಚಿವರ ಹೇಳಿಕೆಯನ್ನು ಟೀಕಿಸಿದ್ದಾರೆ.

ಬಿಪಿಎಲ್ ಕಾರ್ಡ್‌ಗೆ ಯಾರು ಅರ್ಹರಲ್ಲ

2017 ರ ಮಾರ್ಚ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲದ ಕುಟುಂಬಗಳು

* ಸರ್ಕಾರ,ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ–ಮಂಡಳಿಗಳ ಕಾಯಂ ನೌಕರರು.

* ಆದಾಯ ತೆರಿಗೆ, ವೃತ್ತಿ ತೆರಿಗೆ, ಸೇವಾ ತೆರಿಗೆ ಪಾವತಿಸುವ ಕುಟುಂಬಗಳು

*ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ನಗರ ಪ್ರದೇಶಗಳಲ್ಲಿ 1000 ಚದರಡಿಗಿಂತಲೂ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು

* ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ವಾಣಿಜ್ಯ ವಾಹನಗಳಾದ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಬಿಟ್ಟು, ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲ ಕುಟುಂಬಗಳು

* ತಿಂಗಳಿಗೆ 150 ಯುನಿಟ್‌ಗಳಿಗಿಂತಲೂ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು

* ವಾರ್ಷಿಕ ಆದಾಯ ₹1.20 ಲಕ್ಷಕ್ಕೂ ಅಧಿಕ ಆದಾಯ ಹೊಂದಿರುವ ಕುಟುಂಬಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.