ಮೈಸೂರು: ‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದೊಂದು ಸುಳ್ಳು ಪ್ರಕರಣವಾಗಿದ್ದು, ವಿಚಾರಣೆಯಿಂದ ನನಗೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ಲೋಕಾಯುಕ್ತ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ ಲೋಕಾಯುಕ್ತ ಅಧಿಕಾರಿಗಳು ನನ್ನ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಇಟ್ಟುಕೊಂಡು ಮುಂದಿನ ತನಿಖೆ ಮಾಡುತ್ತಾರೆ. ನಾವು ನಿವೇಶನ ವಾಪಸ್ ನೀಡಿರುವುದು ತಪ್ಪು ಮಾಡಿದ್ದೇವೆ ಎಂದಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದರಿಂದ ಬೇಸರಗೊಂಡು ನನ್ನ ಹೆಂಡತಿ ಆ ತೀರ್ಮಾನ ಕೈಗೊಂಡಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ನಮ್ಮ ವಕೀಲರು ನೋಡಿಕೊಳ್ಳುತ್ತಾರೆ. ನನ್ನ ಬಳಿ ಈ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳು ಇಲ್ಲ. ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಇದೊಂದು ಆರೋಪವಷ್ಟೇ. ಇದು ನನಗೆ ಕಪ್ಪು ಮಸಿ ಅಲ್ಲ’ ಎಂದರು.

ಬಿಜೆಪಿಯಿಂದ ಗೋ ಬ್ಯಾಕ್ ಚಳವಳಿ ಕುರಿತು ಪ್ರತಿಕ್ರಿಯಿಸಿ ‘ ಸ್ನೇಹಿಮಹಿ ಕೃಷ್ಣ ದೂರು ಆಧರಿಸಿ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ. ಈಗ ಬಿಜೆಪಿಯವರು ಗೋಬ್ಯಾಕ್ ಎಂದು ಘೋಷಣೆ ಕೂಗಿದರೆ ಏನು ಅರ್ಥ? ಹಾಗಿದ್ದರೆ ಬಿಜೆಪಿಯವರು ತನಿಖೆಯ ವಿರುದ್ಧ ಇದ್ದಾರ? ’ ಎಂದು ಪ್ರಶ್ನಿಸಿದರು.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎನ್ನುವ ಆಗ್ರಹದ ಕುರಿತು ಪ್ರತಿಕ್ರಿಯಿಸಿ ‘ ಸಿಬಿಐ ಯಾರ ಕೈಯಲ್ಲಿ ಇದೆ? ಬಿಜೆಪಿಯವರು ಯಾವ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರಾ? ಲೋಕಾಯುಕ್ತ ಮಾಡಿರುವುದು ಯಾರು’ ಎಂದು ಪ್ರಶ್ನಿಸಿದರು.

‘ ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುವ ಸಂಸ್ಥೆ. ಬಿಜೆಪಿ ಅವರಿಗೆ ಕಾನೂನಿನ ಮೇಲೆ ಗೌರವವಿಲ್ಲ. ರಾಜ್ಯಪಾಲರು ಲೋಕಾಯುಕ್ತದಿಂದಲೇ ತನಿಖೆ ಮಾಡಿ ಎಂದು ತಾನೇ ಹೇಳಿರುವುದು’ ಎಂದರು.
.ಮುಡಾ ಪ್ರಕರಣ: ಎರಡು ಗಂಟೆ ಸಿದ್ದರಾಮಯ್ಯ ವಿಚಾರಣೆ.ಮುಡಾ ಹಗರಣ: ಸಿಎಂ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.