ಬೆಂಗಳೂರು: ‘ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ರಚಿಸಲಾಗುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಯಾವುದೇ ಹೊಸ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸುವುದಿಲ್ಲ. ಆದರೆ, ಸದ್ಯ ಪ್ರಗತಿಯಲ್ಲಿರುವ ಎಲ್ಲ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

‘ಆಯೋಗದ ವರದಿ ಬರುವವರೆಗೆ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ಮಾತ್ರ ಸ್ಥಗಿತಗೊಳಿಸಲು ಸೀಮಿತವಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಎಲ್ಲ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿಯು ಉದ್ಯೋಗ ಆಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದೂ ಅವರು ತಿಳಿಸಿದ್ದಾರೆ.

‘ಏಕಸದಸ್ಯ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿಪಡಿಸಲಾಗಿದೆ. ವರದಿ ಸಲ್ಲಿಕೆ ಆಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ’ ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.