ಬೆಂಗಳೂರು: ‘ಮೇಕೆದಾಟು ಯೋಜನೆಯನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.

‘ಈ ಯೋಜನೆಯಿಂದ ಇಬ್ಬರಿಗೂ (ಕರ್ನಾಟಕ– ತಮಿಳುನಾಡು) ಅನುಕೂಲವಾಗುತ್ತದೆ. ಹೀಗಾಗಿ ಸೌಹಾರ್ದಯುತವಾಗಿ ಮಾಡೋಣ ಎಂದು ನಾನು ತಮಿಳುನಾಡು ಮುಖ್ಯಮಂತ್ರಿ ಬಳಿ ವಿನಂತಿ ಮಾಡಿದ್ದೆ. ಆದರೆ, ಅವರು ಯಾಕೋ ಸರಿಯಾಗಿ ಸ್ಪಂದಿಸಲಿಲ್ಲ. ಆದರೂ ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ. ಆ ವಿಷಯದಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನ ಬೇಡ’ ಎಂದು ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.