ಹುಬ್ಬಳ್ಳಿ: ‘ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎನ್ನುವುದು ಇದರರ್ಥವಾಗಿದೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎನ್ನುವ ಯಾವ ವಿಶ್ವಾಸವೂ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದು ಸತ್ತ ಹಾಗಾಗಿದೆ. ಅವರು ಪಂಜರದ ಗಿಳಿಯಾಗಿದ್ದು, ಸ್ವಇಚ್ಛೆಯಿಂದ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಉಪಚುನಾವಣೆ ನಂತರ ಈ ಸರ್ಕಾರ ಇರುತ್ತದೆ ಎನ್ನುವ ನಂಬಿಕೆಯಿಲ್ಲ’ ಎಂದರು.

‘ರಾಜ್ಯಕ್ಕೆ ಜೆಪಿಸಿ ತಂಡ ಆಗಮಿಸುತ್ತಿರುವುದೇ ಅನಧಿಕೃತ’ ಎನ್ನುವ ವಕ್ಫ್ ಸಚಿವ ಜಮೀರ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ‘ಮೊದಲು ಅವರು ಕಾನೂನು ಅರಿತುಕೊಳ್ಳಲಿ. ಯಾಕಾಗಿ ಹೀಗೆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರಿಗೆ ಮುಸ್ಲಿಮರು ಮಾತ್ರವಲ್ಲ, ಎಲ್ಲ ಸಮುದಾಯದವರೂ ಮತ ಹಾಕಿದ್ದಾರೆ. ಮಂತ್ರಿಯಾಗಿ ಅವರು ಮೊದಲು ಮಾಡಲಿ. ಅದನ್ನೊಂಮದು ಬಿಟ್ಟು, ಉಳಿದದ್ದನ್ನೆಲ್ಲ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಅವರ ಕೆಲಸ ನೋಡಿ, ರಾಷ್ಟ್ರಕ್ಕೆ ಅವರ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಪೇಕ್ಷೆ ಮೇರೆಗೆ ಅವರು ಸಂಸದರಾಗಿದ್ದು. ಶಿಗ್ಗಾವಿಯ ಉಪ ಚುನಾವಣೆಗೆ ಅವರ ಮಗನನ್ನು ಪಕ್ಷದಿಂದ ನಿಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಕೈಗೊಂಡ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿದೆ. ಮೂರು ಕ್ಷೇತ್ರದಲ್ಲಿಯೂ ನಮ್ಮದೇ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.