ಬೆಂಗಳೂರು: ‘ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆಯಿಂದ ಮುಂದುವರಿಯಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಜೊತೆ ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಸ್ವಯಂ ಸೇವಾಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ನಾನಾ ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿರುವ ಸೆರೋ ಸಮೀಕ್ಷೆಗಳಿಂದ ಕೂಡಾ ಮುಂದೆ ಅಳವಡಿಸಿಕೊಳ್ಳಬೇಕಿರುವ ಕ್ರಮಗಳ ಬಗ್ಗೆ ನಮಗೆ ಮಾಹಿತಿ ಲಭ್ಯವಾಗಿದೆ. ಇದೇ ದಿನ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ’ ಎಂದರು.

‘ದಸರಾ ಮಹೋತ್ಸವ ಸಂದರ್ಭದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ದೀಪಾವಳಿ ಹಬ್ಬದ ಸಂದರ್ಭದಲ್ಲಿಯೂ ನಿರ್ಬಂಧಗಳನ್ನು ಸಡಿಲಿಸುವುದಿಲ್ಲ. ರಾಜ್ಯದಲ್ಲಿರುವ ಕೇಂದ್ರದ ಕೆಲವು ಪ್ರಯೋಗಾಲಯಗಳಲ್ಲಿ ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡಬೇಕು. ಆರ್‌ಟಿಪಿಸಿಆರ್ ಕಿಟ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಬೇಕು ಮತ್ತು ಆಕ್ಸಿಜನ್ ಪ್ಲಾಂಟ್‌ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನೆರವು ನೀಡಬೇಕು’ ಎಂದೂ ಕೇಂದ್ರ ಸಚಿವರ ಬಳಿ ಸುಧಾಕರ್ ಮನವಿ ಮಾಡಿದರು.

ಕೇಂದ್ರ ಮೆಚ್ಚುಗೆ: ‘ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಲಾಕ್‌ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.

‘ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಪ್ರಯಾಣಿಕರ ಮೇಲೆ ನಿಗಾ ವಹಿಸಬೇಕು. ಹಾಗೆಯೇ ಐಎಲ್‌ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್‌ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್ ವಿಷಯದಲ್ಲಿ ಈಗಾಗಲೇ ಕೆಲವು ಸೂಚನೆ ನೀಡಲಾಗಿದೆ. ಆ ಬಗ್ಗೆಯೂ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕೇಂದ್ರ ಸಚಿವರಿಗೆ ವಿವರಿಸಿದ ಸುಧಾಕರ್, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞತೆ ತಿಳಿಸಿದರು. ‘ಲಾಕ್ ಡೌನ್‌ಗೂ ಮೊದಲು ನಿಯಂತ್ರಣದಲ್ಲಿದ್ದ ಕೋವಿಡ್, ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು’ ಎಂದರು

‘ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಟೆಸ್ಟ್ ಸಂಖ್ಯೆ ಹೆಚ್ಚಳದ ಮೂಲಕ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಕೆಲವು ಜಿಲ್ಲೆಗಳ ಅಧಿಕಾರಿಗಳ ಜತೆಗೂ ಕೇಂದ್ರ ಸಚಿವರು ಸಂವಾದ ನಡೆಸಿದರು. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.