ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಕೆ.ಪಿ.ಎಂ.ಇ ತಿದ್ದುಪಡಿ ಕಾಯ್ದೆ 2017ರ ಸೆಕ್ಷನ್ 6 ಅನ್ವಯ, 2019ರ ಏ.4ರಿಂದ ಜಾರಿಗೆ ಬರುವಂತೆ ಸರ್ಕಾರಿ ಆಸ್ಪತ್ರೆಯಿಂದ 200 ಮೀ. ದೂರದೊಳಗೆ ಖಾಸಗಿ ಪ್ರಯೋಗಾಲಯಕ್ಕೆ ಅನುಮತಿ ನೀಡತಕ್ಕದಲ್ಲ. ಅದಾಗ್ಯೂ, ಕೆಲವು ಅನಧಿಕೃತ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ಸರ್ಕಾರಿ ಆಸ್ಪತ್ರೆಯಿಂದ 200 ಮೀ. ಅಂತರದೊಳಗೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆಯುಕ್ತಾಲಯಕ್ಕೆ ದೂರುಗಳು ಬಂದಿವೆ. ಆದ್ದರಿಂದ ತಮ್ಮ ಕಾರ್ಯ ವ್ಯಾಪ್ತಿಗೆ ಒಳಪಡುವ ಮತ್ತು ಸರ್ಕಾರಿ ಆಸ್ಪತ್ರೆಯಿಂದ 200 ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಸ್ಥಳ ಪರಿಶೀಲನೆ ಮಾಡಬೇಕು’ ಎಂದು ತಿಳಿಸಿದ್ದಾರೆ.

‘ಖಾಸಗಿ ಪ್ರಯೋಗಾಲಯಗಳು ಕೆ.ಪಿ.ಎಂ.ಇ ಕಾಯ್ದೆ ಅಥವಾ ನಿಯಮವನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ಅಂತಹ ಪ್ರಯೋಗಾಲಯಗಳನ್ನು ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಂದ್ ಮಾಡಲಾದ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಸಂಪೂರ್ಣ ಕ್ರೋಡೀಕೃತ ವಿವರವನ್ನು ಮಾ.30ರೊಳಗೆ ರವಾನಿಸಬೇಕು’ ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.