ಬೆಂಗಳೂರು: ಎಂತಹ ಪರಿಸ್ಥಿತಿ ಎದುರಾದರೂ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವುದಿಲ್ಲ. ಗ್ಯಾರಂಟಿಗಳ ವಿರುದ್ಧ ಹೇಳಿಕೆ ನೀಡುವ ಕಾಂಗ್ರೆಸ್ ಶಾಸಕರಿಗೆ ನೋಟಿಸ್ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಶಕ್ತಿ ಯೋಜನೆ ಸೇರಿದಂತೆ ಕೆಲ ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು ಬಡವರಿಗೆ ಮನೆಗಳನ್ನು ಕೊಡಲು ಸರ್ಕಾರ ಕ್ರಮ ಕೈಗೊಳ್ಳುವುದು ಒಳ್ಳೆಯದು’ ಎಂಬ ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ ಅವರ ಬೇಡಿಕೆ ಒಪ್ಪಲು ಸಾಧ್ಯವಿಲ್ಲ. ಅವರಿಗೆ ವಿವರಣೆ ಕೇಳಿ ನೋಟಿಸ್ ನೀಡಲಾಗುವುದು, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.

‘ಈ ಯೋಜನೆಗಳ ಮೂಲಕ ಪ್ರತಿ ಕ್ಷೇತ್ರಕ್ಕೆ ₹250 ಕೋಟಿ ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಜತೆಗೆ, ಇತರೆ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ ಎಂಬ ದೂರುಗಳಿದ್ದರೆ ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.