ಬೆಂಗಳೂರು: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 (58 ಹೈ.ಕ) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ.

ಆಗಸ್ಟ್ 12ರಿಂದ ಸೆ. 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯಿದೆ.

ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ. ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್ಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.