ಬೆಂಗಳೂರು: ಪತಂಜಲಿ ಕಂಪನಿಯ ಎಲ್ಲ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವಂತೆ ಔಷಧ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಈ ಬಗ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ‘ಬಾಬಾ ರಾಮದೇವ ಮತ್ತು ಅವರ ಪತಂಜಲಿ ಕಂಪನಿ ಮಾಡಿದ ನಿರ್ದಯ ವಂಚನೆಯನ್ನು ಕ್ಷಮಿಸಲಾಗದು. ಅವರು ಆಯುರ್ವೇದ ಮತ್ತು ಭಾರತೀಯ ಔಷಧ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆದ್ದರಿಂದ ಪತಂಜಲಿ ಕಂಪನಿಯ ಎಲ್ಲ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಸೂಚಿಸಿದ್ದೇನೆ’ ಎಂದು ಹೇಳಿದ್ದಾರೆ.

ಪತಂಜಲಿ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಯೋಗ ಗುರು ರಾಮದೇವ ಹಾಗೂ ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.