ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ ಎಂದರು.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳ ಅಳಲು. ಅದು ಕೂಡ ಗಮನದಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ಪ್ರಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನಾಗೇಶ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.