ಬೆಂಗಳೂರು: ‘ಒಕ್ಕಲಿಗ ಸಮುದಾಯದ ಬಗ್ಗೆ ಸಾಹಿತಿ ಕೆ.ಎಸ್. ಭಗವಾನ್ ಅವರು ಅಸಂಬದ್ಧ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿರುವ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

‘ಪ್ರಚಾರದ ಆಸೆಯಿಂದ ಹೇಳಿಕೆ ನೀಡಿದ್ದಾರೆ. ಕೂಡಲೇ ಅವರು ಸಮುದಾಯದ ಕ್ಷಮೆ ಕೇಳಬೇಕು. ಭಗವಾನ್ ಅವರಿಂದ ನಾವು ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸಂಘದ ಆಡಳಿತ ಮಂಡಳಿಯಲ್ಲಿ ಚರ್ಚಿಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ ಹೇಳಿದರು.

ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಒಕ್ಕಲಿಗರ ಸಮುದಾಯದವರೇ. ನಾಡನ್ನು ಕಟ್ಟಿದವರಲ್ಲಿ ಒಕ್ಕಲಿಗರ ಪಾತ್ರ ಪ್ರಮುಖವಾಗಿದೆ ಎಂದರು.

ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಿದ್ಧಪಡಿಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯೇ ಅವೈಜ್ಞಾನಿಕವಾಗಿದೆ ಎಂದು ಅವರು ದೂರಿದರು.

ಸಂಘದ ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡ, ಉಪಾಧ್ಯಕ್ಷ ಎಲ್.ಶ್ರೀನಿವಾಸ್, ಕಾರ್ಯಾಧ್ಯಕ್ಷ ಎಲುವಳಿ ರಮೇಶ್, ಸಂಘದ ನಿರ್ದೇಶಕ ಬಿ.ಪಿ.ಮಂಜೇಗೌಡ, ಕೆಂಪೇಗೌಡ ಆಸ್ಪತ್ರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ನೆಲ್ಲಿಗೆರೆ ಬಾಲು ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.