ಬೆಂಗಳೂರು: ‘ರಾಜ್ಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು; ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು– ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಪ್ರಯಾಣ ದರ ನಿಗದಿಪಡಿಸಬೇಕು’ ಎಂದು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ‘ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ ಮತ್ತು ‘ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ‘ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾಗೊಳಿಸಿದೆ.

‘ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಉಬರ್‌ಗಳು ಸರ್ಕಾರದ ಆದೇಶದ ಪ್ರಕಾರ ಮತ್ತು ನಿಗದಿಪಡಿಸಿದ ದರದ ಮೇಲೆ ಶೇ 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹವಾಗಿವೆ‘ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

‘ನಿಗದಿಗಿಂತಲೂ ಹೆಚ್ಚಿನ ದರ ವಿಧಿಸಿ ಓಲಾ ಮತ್ತು ಉಬರ್‌ಗಳು ತಮ್ಮ ಆ್ಯಪ್ ಮೂಲಕ ಆಟೋ ರಿಕ್ಷಾ ಸೇವೆ ನೀಡುತ್ತಿವೆ. ಈ ಸೇವೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ರಾಜ್ಯ ಸರ್ಕಾರ 2022ರ ನವೆಂಬರ್ 25 ರಂದು ಅಧಿಸೂಚನೆ ಹೊರಡಿಸಿತ್ತು.

‘ಈ ಅಧಿಸೂಚನೆ ಸಂಪೂರ್ಣ ಕಾನೂನು ಬಾಹಿರ, ಏಕಪಕ್ಷೀಯ, ದುರುದ್ದೇಶಪೂರಿತ, ತರ್ಕಬಾಹಿರ ಮತ್ತು ಅಧಿಕಾರ ವ್ಯಾಪ್ತಿ ಮೀರಿದೆ’ ಎಂದು ಆಕ್ಷೇಪಿಸಿದ್ದ ಅರ್ಜಿದಾರ ಕಂಪನಿಗಳು ಇದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.