ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿ ವರದಿ ನೀಡಿದ ತಕ್ಷಣ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅರಮನೆ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಮಾಡಿರುವ ವಿವಿಧ ರಾಜ್ಯಗಳಿಗೆ ಸಮಿತಿ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. ಶೀಘ್ರದಲ್ಲೇ ವರದಿ ನೀಡಲು ಸೂಚಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಬಡ್ತಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನೌಕರರು ಹಾಗೂ ಅವರ ಅವಲಂಬಿತ ಕುಟುಂಬಗಳ ಸದಸ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ‘ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆ’ ಜಾರಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆರು ಮತ್ತು ಏಳನೇ ಆಯೋಗದ ಎರಡೂ ಶಿಫಾರಸುಗಳನ್ನು ನಾನು ಮುಖ್ಯಮಂತ್ರಿ ಇದ್ದಾಗಲೇ ಜಾರಿ ಮಾಡಿರುವೆ. 2018ರಲ್ಲಿ 10,500 ಕೋಟಿ ಹಾಗೂ 2024ರಲ್ಲಿ 20 ಸಾವಿರ ಕೋಟಿ ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾಗಿದೆ. ಜನರ ತೆರಿಗೆ ಹಣವನ್ನು ಖರ್ಚು ಮಾಡುವಾಗ ಸರ್ಕಾರ ಸದಾ ಮಿತವ್ಯಯದ ಬಗ್ಗೆ ಚಿಂತಿಸುತ್ತದೆ. ಆದರೂ, ಸರ್ಕಾರಿ ನೌಕರರಿಗೆ ಸವಲತ್ತು ನೀಡುವಾಗ ಆಯೋಗದ ಶಿಫಾರಸಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.