ಬೆಂಗಳೂರು: ‘ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು’ ಎಂದೂ ಹೇಳಿದರು

‘ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಇದು ಮೋದಿಯ ಧರ್ಮವೊ ಏನೋ ಇನ್ನೂ ಯಾವುದೆಂದು ಗೊತ್ತಾಗುತ್ತಿಲ್ಲ. ಅಮಿತ್ ಶಾ ಧರ್ಮವೇ ಎಂದೂ ಗೊತ್ತಾಗಿಲ್ಲ’ ಎಂದೂ ಟೀಕಸಿದರು.

‘ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ಈ ಬಗ್ಗೆ ನಮಗೆ ಮಾಹಿತಿ ಬರುತ್ತಿದೆ. ಮಾಹಿತಿ ಇದ್ದೇ ಹೇಳುತ್ತಿದ್ದೇನೆ’ ಎಂದರು.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಎಂದು ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ’ ಎಂದರು.

‘ಬಂಧಿತನ ಮೇಲೆ 13 ಕೇಸ್ ಇದೆ. ಕಾನೂನು ಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆಂದೂ ಗೊತ್ತಿದೆ. ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಶಾಂತಿ ಕದಡುವ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲೇಬೇಕು’ ಎಂದರು.

‘30 ವರ್ಷ ಅವರನ್ನು ಬಿಟ್ಟಿದ್ದೇ ತಪ್ಪು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಅಪರಾಧವೇ. ಎಲ್.ಕೆ ಅಡ್ವಾಣಿಯವರ ಮೇಲೆ ಇರುವ ಕೇಸ್ ಇನ್ನೂ ವಿಲೇವಾರಿ ಆಗಿಲ್ಲ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇಷ್ಟು ದಿನ ಹಳೆ ಕೇಸ್ ಮೇಲೆ ಕ್ರಮಕೈಗೊಳ್ಳದ ಅಧಿಕಾರಿಗಳನ್ನು ಹಾಗೇ ಬಿಟ್ಟಿದ್ದೇ ತಪ್ಪು’ ಎಂದೂ ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.