ಬೆಂಗಳೂರು: ಎಲ್ಕೆಜಿ, ಯುಕೆಜಿ ಸಹಿತ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಆನ್ಲೈನ್ ತರಗತಿ ಆರಂಭಿಸಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿರುವಂತೆಯೇ, ಫೇಸ್ಬುಕ್ನಲ್ಲಿ ಹಲವಾರು ಮಂದಿ ಸಚಿವರನ್ನು ಬೆಂಬಲಿಸಿದ್ದಾರೆ.

ದಯವಿಟ್ಟು ನಿಮ್ಮ ಅಧಿಕಾರ ಅವಧಿಯಲ್ಲಿ ಹೀಗೆ ಸಾರ್ವಜನಿಕ ದುಡ್ಡನ್ನು ಮನಸೋ ಇಚ್ಛೆ ಲೂಟಿ ಮಾಡುತ್ತಿರುವ ಕೆಲವೊಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕದಿದ್ದಲ್ಲಿ ಮುಂದಿನ ಪೀಳಿಗೆಗೆ ಅದರಲ್ಲೂ ಮಧ್ಯಮ ವರ್ಗದ ಜನರಿಗೆ ತುಂಬಾನೇ ತೊಂದರೆ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಎಸ್.ಕೆ.ರಾಘವೇಂದ್ರ ಎಂಬುವವರು ಹೇಳಿದ್ದಾರೆ.

5ನೇ ತರಗತಿವರೆಗೆ ಆನ್ಲೈನ್ ಶಿಕ್ಷಣದ ಅಗತ್ಯವೇ ಇಲ್ಲ ಎಂದು ಸಿ.ಎ.ಸತೀಶ್ ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ.

ಭವಿಷ್ಯದಲ್ಲಿ ಮತ್ತೆಂದೂ ಮುಗ್ಧ ಕಂದಮ್ಮಗಳ ಜತೆ ಚೆಲ್ಲಾಟವಾಡದಂತೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಮತ್ತು ಅನಿವಾರ್ಯತೆ ಇದೆ, ಆ ನಂಬಿಕೆಯೂ ನಿಮ್ಮ ಮೇಲಿದೆ ಎಂದು ಕೆ.ವಿ.ಪರಮೇಶ್ ಎಂಬುವರು ಹೇಳಿದ್ದಾರೆ.

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಈ ಹಂತದಲ್ಲಿ ಶಾಲೆಗಳನ್ನು ತೆರೆಯಲು ಅವಕಾಶ ಕೊಡಬೇಡಿ ಎಂದು ಅಶೋಕ್ ಎಂಬುವವರು ಒತ್ತಾಯಿಸಿದ್ದಾರೆ.

2,500ಕ್ಕೂ ಅಧಿಕ ಮಂದಿ ಈ ವಿಷಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, 671ಮಂದಿ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.