ಬೆಂಗಳೂರು: ‘11ಇ, ಪೋಡಿ, ಭೂ ಪರಿವರ್ತನೆ, ಹದ್ದುಬಸ್ತ್ ಮತ್ತು ಇತರ ನಕ್ಷೆಗಳನ್ನು ಪಡೆಯಲು ಇನ್ನು ಮುಂದೆ ಸರ್ವೆ ಕಚೇರಿಗಳಿಗೆ ಅಲೆದಾಡುವ ಅಗತ್ಯ ಇಲ್ಲ. ಅರ್ಜಿ ಸಲ್ಲಿಸಿದವರು ಆನ್‌ಲೈನ್ ಮೂಲಕ ಪಡೆದುಕೊಳ್ಳಬಹುದು’ ಎಂದು ಸರ್ವೆ ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ (ಎಸ್‌ಎಸ್‌ಎಲ್ಆರ್) ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

‘ಈ ನಕ್ಸೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ಶುಲ್ಕ ಪಾವತಿಸುವುದರಿಂದ ಆನ್‌ಲೈನ್ ನಕ್ಷೆಗಳನ್ನು ಮುದ್ರಿಸಿಕೊಳ್ಳಲು ಮತ್ತೆ ಹೆಚ್ಚುವರಿಯಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

‘ಅರ್ಜಿ ಸಲ್ಲಿಸಿದ ಬಳಿಕ, ನಕ್ಷೆಯನ್ನು ಅನುಮೋದಿಸಿದ ತಕ್ಷಣ ವೆಬ್‌ಸೈಟ್ ಲಿಂಕ್‌ನಲ್ಲಿ (http://103.138.196.154/service19/Report/ApplicationDetails) ಅದನ್ನು ಮುದ್ರಿಸಲು ಲಭ್ಯವಿರುತ್ತದೆ. ಅದೇ ಲಿಂಕ್‌ನಲ್ಲಿ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿಯನ್ನೂ ತಿಳಿದುಕೊಳ್ಳಬಹುದು‘ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.