ಬೆಂಗಳೂರು: ‘ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಿರುವ ಮಾತುಗಳಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಯೇ ಸಾಕ್ಷಿ’ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಶಾಸಕರಿಗೆ ತಲಾ ₹ 50 ಕೋಟಿ ಆಮಿಷದ ಬಗ್ಗೆ ಸಿ.ಎಂ ಹೇಳಿದರು. ಸರ್ಕಾರ ಬೀಳಿಸಲು ₹ 1 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದರು. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ’ ಎಂದು ಪ್ರಶ್ನಿಸಿದರು.

ಶಾಸಕರು ಕುರಿಗಳಲ್ಲವೇ?: ‘ಶಾಸಕರ ಖರೀದಿ ಬಗ್ಗೆ ತನಿಖೆ ಮಾಡಿ. ಖರೀದಿ ಮಾಡಲು ಶಾಸಕರು ಕುರಿಗಳೇ’ ಎಂದು ಬಿಜೆಪಿಯವರು ಕೇಳಿದ್ದಾರೆ. ಹಾಗಾದರೆ ಈ ಹಿಂದೆ ಖರೀದಿ ಮಾಡಿದ್ದ ಶಾಸಕರು ಕುರಿಗಳಲ್ಲವೇ? ಎಂದು ಪ್ರಶ್ನಿಸಿದರು.

‘ಬಿಜೆಪಿಯವರು ದನ, ಕುರಿಗಳನ್ನು ಖರೀದಿ ಮಾಡಿದಂತೆ ಶಾಸಕರನ್ನು ಖರೀದಿ ಮಾಡಿದ್ದಿರಲ್ಲವೇ ಎಂದು ಈ ಹಿಂದೆಯೂ ಪ್ರಶ್ನಿಸಿದ್ದೆವು. ಅಶ್ವತ್ಥ ನಾರಾಯಣ್ ಜೊತೆ ಶ್ರೀನಿವಾಸ್ ಗೌಡರ ಮನೆಗೆ ಹೋಗಿ ಹಣ ಇಟ್ಟು ಬಂದೆ ಎಂದು ಸಿ.ಪಿ.ಯೋಗೇಶ್ವರ್ ಸದನದಲ್ಲೇ ಹೇಳಿಲ್ಲವೇ’ ಎಂದು ಅವರು ಪ್ರಶ್ನಿಸಿದರು.

ಯತ್ನಾಳ್ ದಡ್ಡರೇ?: ‘ಈ ಹಿಂದೆ ಆಡಳಿತದಲ್ಲಿ ಇದ್ದಾಗ ಬಿಜೆಪಿಯವರು ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ನೀಡಿದ್ದರು ಎಂದು ಯತ್ನಾಳ್ ಅವರು ಆರೋಪಿಸಿದ್ದರು. ಈಗ ವಿರೋಧ ಪಕ್ಷದ ಸದಸ್ಯರಾಗಿದ್ದಾಗಲೂ ಇದೇ ಆರೋಪ ಮಾಡುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವರಾಗಿರುವ ಯತ್ನಾಳ್, ಈ ರೀತಿಯ ಹೇಳಿಕೆಯನ್ನು ನೀಡಲು ದಡ್ಡರೇ?’ ಎಂದರು.

ಕೋಮುಗಲಭೆಗೆ ಬಿಜೆಪಿ ಪ್ರಯತ್ನ: ‘ವಕ್ಫ್ ಭೂಮಿ ವಿಚಾರದಲ್ಲಿ ಬಿಜೆಪಿಯ ಅಭಿಯಾನ ಮೂರ್ಖತನದ್ದು. ರೈತರ ಪಹಣಿಗಳಲ್ಲಿ ವಕ್ಫ್ ಎಂದು ಬಿಜೆಪಿ ಕಾಲದಲ್ಲಿ ನಮೂದಾಗಲು ಆರಂಭವಾಯಿತು. ಈ ಬಗ್ಗೆ ನಮ್ಮ ಬಳಿ ಎಲ್ಲ ದಾಖಲೆಗಳಿವೆ. ಉಪ ಚುನಾವಣೆ ಇದ್ದುದರಿಂದ ಬಹಿರಂಗಪಡಿಸಲು ಆಗಿಲ್ಲ. ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ವಕ್ಫ್ ವಿಚಾರದಲ್ಲಿ ಬಿಜೆಪಿ ಕೈವಾಡವನ್ನು ನಾವು ಬಹಿರಂಗಪಡಿಸುತ್ತೇವೆ’ ಎಂದು ಶಿವಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.