ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದ ಕಾಮಗಾರಿಗಳ ಮಿತಿಯನ್ನು ₹ 1 ಕೋಟಿಗೆ ಹೆಚ್ಚಿಸಿ ಅವಕಾಶ ಕಲ್ಪಿಸಲು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

2023–24ನೇ ಸಾಲಿನ ಬಜೆಟ್ನಲ್ಲಿ ಅನುಸೂಚಿತ ಜಾತಿ (ಎಸ್ಸಿ) ಮತ್ತು ಅನುಸೂಚಿತ ವರ್ಗಗಳ (ಎಸ್ಟಿ) ಗುತ್ತಿಗೆದಾರ ರಿಗೆ ಸರ್ಕಾರದ ಗುತ್ತಿಗೆ ಕಾಮಗಾರಿ ಗಳಲ್ಲಿ ಗುತ್ತಿಗೆ ಮೀಸಲಾತಿ ಮಿತಿ ಯನ್ನು ₹ 1 ಕೋಟಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದರು.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಗುತ್ತಿಗೆ ಮೀಸಲಾತಿ ಮಿತಿ ಹೆಚ್ಚಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ನೀಡಲಾಗಿದೆ.

ಸಂಪುಟ ಸಭೆಯ ಇತರ ತೀರ್ಮಾನಗಳು

l 2022–23ನೇ ಸಾಲಿನಿಂದ ಆರಂಭವಾಗಿರುವ ಪರಿಷ್ಕೃತ ಯಶಸ್ವಿನಿ ಯೋಜನೆಯಡಿ ಬರುವ ಕೆಲವು ಚಿಕಿತ್ಸೆಗಳಿಗೆ ಹಿಂದಿನ ಯಶಸ್ವಿನಿ ಯೋಜನೆಯ ದರಗಳನ್ನೇ ಅಳವಡಿಸಿಕೊಳ್ಳಲು ಜ. 24ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ

l ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀರಣ ಯೋಜನೆಯಡಿ ಒಟ್ಟು ₹ 66.99 ಕೋಟಿಗಳಿಗೆ ಹಾರ್ಡ್ವೇರ್ ಸಾಮಾಗ್ರಿಗಳನ್ನು ಖರೀದಿಸಲು ಅನುಮೋದನೆ

l ಅಂಗವಿಕಲ ಸರ್ಕಾರಿ ನೌಕರರಿಗೆ ಗುಂಪು–ಡಿ ಮತ್ತು ಗುಂಪು–ಸಿ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಶೇ 4ರಷ್ಟು ಮೀಸಲಾತಿ ಕಲ್ಪಿಸುವ ಪ್ರಸ್ತಾವಕ್ಕೆ ಒಪ್ಪಿಗೆ

l ನೂತನ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರವನ್ನು ₹ 592.86 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ

l ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೈಗೊಂಡಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗಳ ಮೂಲ ಅಂದಾಜು ₹ 9.50 ಕೋಟಿಗಳಿದ್ದು, ಪರಿಷ್ಕೃತ ಅಂದಾಜು ₹ 11.18 ಕೋಟಿಗೆ ಆಡಳಿತಾತ್ಮಕ ಅನುಮೋದನೆ

l ರಾಜ್ಯ ಏಳು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಉನ್ನತೀಕರಿಸಲು ಮತ್ತು ಬೆಂಗಳೂರು ಸರ್ಕಾರಿ ಎಸ್ಕೆಎಸ್ಜೆಐಟಿ ಸಂಸ್ಥೆಯ ಸಿವಿಲ್ ಕಾಮಗಾರಿಗಳನ್ನು ₹ 32.50 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ

l ಶೈಕ್ಷಣಿಕ ಹಿಂದುಳಿದ ಜಿಲ್ಲೆಗಳಲ್ಲಿ 10 ಮಾದರಿ ಎಸ್ಸಿ, ಎಸ್ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯ ಮೂಲ ಅಂದಾಜು ₹ 237.50 ಕೋಟಿಯಿದ್ದು, ಪರಿಷ್ಕೃತ ಅಂದಾಜು ₹ 347.35 ಕೋಟಿಗೆ ಅನುಮೋದನೆ

l ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 11 ಕ್ರಿಮಿನಲ್ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯುವುದು

l ನಬಾರ್ಡ್ ನೆರವಿನ ವಿಜಯಪುರ ಜಿಲ್ಲೆ ತಿಕೋಟ ತಾಲ್ಲೂಕಿನ ತೊರವಿ ಗ್ರಾಮದಲ್ಲಿ ಒಣದ್ರಾಕ್ಷಿ ಸಂಸ್ಕರಣೆಗೆ ಸಮುದಾಯ ಸೌಲಭ್ಯ ಕೇಂದ್ರದ ಜೊತೆ 10 ಸಾವಿರ ಟನ್ ಶೀತಲ ಘಟಕವನ್ನು ₹ 40.75 ಕೋಟಿ ಮೊತ್ತದಲ್ಲಿ ಸ್ಥಾಪಿಸಲು ಅನುಮೋದನೆ

l ಕರ್ನಾಟಕ ಗೃಹ ಮಂಡಳಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ, ಪುಲಿಮಂಚಿ ಹಾಗೂ ಸಸಿಮಾಕನಹಳ್ಳಿ ಗ್ರಾಮದ ಒಟ್ಟು 71 ಎಕರೆ 29 ಗುಂಟೆ ಜಮೀನುಗಳನ್ನು ಶೇ 50:50 ಅನುಪಾತದ ಪಾಲುದಾರಿಕೆಯಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲು ಹಾಗೂ ಪ್ರತಿ ಎಕರೆಗೆ ₹ 15 ಲಕ್ಷ ಮುಂಗಡ ಹಣವನ್ನು ಭೂ ಮಾಲೀಕರಿಗೆ ನೀಡಲು ಹಾಗೂ ₹ 113.77 ಕೋಟಿ ಮೊತ್ತದಲ್ಲಿ ವಸತಿ ಯೋಜನೆ ಕೈಗೊಳ್ಳಲು ಅನುಮೋದನೆ

l ಧಾರವಾಡ ಜಿಲ್ಲೆಯ ಧಾರವಾಡ ತಾಲ್ಲೂಕು ಮತ್ತು ಹೋಬಳಿ ಅತ್ತಿಕೊಳ್ಳ ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ 26 ಎಕರೆ 28 ಗುಂಟೆ ಜಮೀನನ್ನು ಶೇ 50:50 ಅನುಪಾತದ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲು ಹಾಗೂ ಪ್ರತಿ ಎಕರೆಗೆ ₹ 10 ಲಕ್ಷ ಮುಂಗಡ ಹಣವನ್ನು ಭೂ ಮಾಲೀಕರಿಗೆ ನೀಡಲು ಹಾಗೂ ₹ 43.36 ಕೋಟಿ ಮೊತ್ತದಲ್ಲಿ ವಸತಿ ಯೋಜನೆ ಕೈಗೊಳ್ಳಲು ಅನುಮೋದನೆ

l ಕರ್ನಾಟಕ ಗೃಹ ಮಂಡಳಿಯ ವಸತಿ ಯೋಜನೆಗೆ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕು ಇರಕಲಗಡ ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ಒಟ್ಟು ಕ್ಷೇತ್ರ 25 ಎಕರೆ 15 ಗುಂಟೆ ಜಮೀನನ್ನು ಶೇ 60:40 ಅನುಪಾತದ ಪಾಲುದಾರಿಕೆಯಲ್ಲಿ ಅಭಿವೃದ್ಧಿಪಡಿಸಿ ನಿವೇಶನಗಳನ್ನು ಭೂಮಾಲೀಕರಿಗೆ ನೀಡಲು ಹಾಗೂ ಯೋಜನೆ ವೆಚ್ಚ ₹ 27.50 ಕೋಟಿಗಳಿದ್ದು, ಪ್ರತಿ ಎಕರೆಗೂ ₹ 5 ಲಕ್ಷಗಳ ಮುಂಗಡ ಹಣವನ್ನು ಭೂ ಮಾಲೀಕರಿಗೆ ನೀಡಲು ಒಪ್ಪಿಗೆ

l ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಗ್ರಾಹಕರಿಗೆ ಕೊಳವೆ ಮೂಲಕ ನೈಸರ್ಗಿಕ ಅನಿಲ ಸರಬರಾಜು (ಪಿಎನ್ಜಿ) ಮತ್ತು ವಾಹನಗಳಿಗೆ ಕಂಪ್ರೆಸ್ಡ್ ನೈಸರ್ಗಿಕ ಅನಿಲ (ಸಿಎನ್ಜಿ) ಒದಗಿಸಲು, ‘ನಗರ ಅನಿಲ ವಿತರಣಾ ಜಾಲದ ಅಭಿವೃದ್ಧಿ ರಾಜ್ಯ ನೀತಿ’ಗೆ ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.