ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸಲಾಗದೇ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ದೂರಿದರು.

ಕೆಟ್ಟ ಆರ್ಥಿಕ ನಿರ್ವಹಣೆಯಿಂದ ತಮ್ಮ ತಪ್ಪು ಮುಚ್ಚಿಕೊಳ್ಳಲು ಎನ್ಡಿಆರ್ಎಫ್ ನೆರವಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಪ್ರಹಸನ ಮಾಡಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣಾ ನೀತಿ ಸಂಹಿತೆ ಜಾರಿ ಆದ ಬಳಿಕ ಈ ಪ್ರಯತ್ನ ನಡೆಸಿದ್ದಾರೆ. ಇಲ್ಲಿಯವರೆಗೆ ಇವರು ನಿದ್ದೆ ಮಾಡುತ್ತಿದ್ದರೇ? ಈ ಪ್ರಹಸದ ಮೂಲಕ ಜನರ ಗಮನ ಬೇರೆಡೆ ಸೆಳೆದು ಚುನಾವಣೆ ಮುಗಿಸಿಕೊಂಡು ಬಿಡಬೇಕು ಎಂಬ ಚಿಂತನೆ ಮಾಡಿದ್ದರೆ ಅದು ಅವರ ಭ್ರಮೆ ಎಂದು ಹೇಳಿದರು.

ಬೆಂಗಳೂರು ಸೇರಿ, ರಾಜ್ಯದ ಜನರಿಗೆ ಕುಡಿಯುವ ನೀರು ಕೊಡಲು ಇವರಿಗೆ ಸಾಧ್ಯ ಆಗುತ್ತಿಲ್ಲ. ಆದರೆ, ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಂಡ ಪ್ರವೃತ್ತಿ ಮುಖ್ಯಮಂತ್ರಿಯವರದು. ಈ ರಾಜ್ಯ ದಿವಾಳಿ ಆಗಿದೆ ಎಂದು ಪ್ರಧಾನಿ ಹೇಳಿದ್ದರು. ಅದನ್ನು ಸಿದ್ದರಾಮಯ್ಯ ಸಾಬೀತು ಮಾಡಿದ್ದಾರೆ ಎಂದರು.

‘ರಾಜ್ಯದಲ್ಲಿ ಅತಿ ದೊಡ್ಡ ಜಲಕ್ಷಾಮ ತಲೆದೋರಿದೆ. ಆದರೆ, ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮನೆ ಮುಂದೆ ಗಿಡಗಳಿಗೆ ನೀರು ಹಾಕಬೇಡಿ, ಕಾರು ತೊಳೀಬೇಡಿ ಎನ್ನುವ ಸುತ್ತೋಲೆ ಹೊರಡಿಸಿದ್ದಾರೆ. ಇನ್ನು ಸ್ವಲ್ಪ ದಿನ ಕಳೆದರೆ ಇನ್ನೇನು ತೊಳೀಬೇಡಿ ಎನ್ನುತ್ತಾರೋ ಗೊತ್ತಿಲ್ಲ’ ಎಂದು ರಾಜೀವ್ ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.