ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವೃಂದ ಮತ್ತು ನೇಮಕಾತಿ ನಿಯಮಾವಳಿಗಳನ್ನು ಅಂತಿಮಗೊಳಿಸಲು ಒತ್ತಾಯಿಸಿ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದವರು ಆ.16ರಂದು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಲಿದ್ದಾರೆ.

‘ಆ.15ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ದಾವಣಗೆರೆ, ಹುಬ್ಬಳ್ಳಿ– ಧಾರವಾಡ, ಕಲಬುರಗಿ, ಮಂಗಳೂರು, ಬೆಳಗಾವಿ, ಮೈಸೂರು, ಬಳ್ಳಾರಿ, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆ ಸಿಬ್ಬಂದಿ ಕರಾಳ ದಿನ ಆಚರಿಸಲಿದ್ದಾರೆ. ನಂತರದ ದಿನಗಳಲ್ಲಿ ಮುಷ್ಕರ ನಡೆಸುತ್ತೇವೆ’ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತರಾಜ್ ತಿಳಿಸಿದ್ದಾರೆ. ‘ಪಾಲಿಕೆಗಳಲ್ಲಿ ನೌಕರರಿಗೆ ಆರೋಗ್ಯ ಸೌಲಭ್ಯದ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ, ಜಿ.ಪಿ.ಎಫ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಲಾಗಿದೆ. ಕ್ರಮ ಕೈಗೊಂಡಿಲ್ಲ. ಹೀಗಾಗಿ ಕರಾಳ ದಿನಾಚರಣೆ, ಮುಷ್ಕರ ನಡೆಸುವ ಬಗ್ಗೆ
ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಸಚಿವರು, ಪೌರಾಡಳಿತ ಇಲಾಖೆ ನಿರ್ದೇಶಕರಿಗೂ ಪತ್ರ ಬರೆದು ತಿಳಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.