ಬೆಂಗಳೂರು: ಫ್ರಾನ್ಸ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡೆ ನ್ಯಾಷನಲ್ ಡ್ಯು ಮೆರಿಟೆ’ಗೆಭಾರತೀಯ ಭೌತವಿಜ್ಞಾನಿ ರೋಹಿಣಿ ಗೋಡ್ಬೋಲೆ ಭಾಜನರಾಗಿದ್ದಾರೆ.

ಇವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಸೆಂಟರ್ ಫಾರ್ ಹೈ ಎನರ್ಜಿ ಫಿಸಿಕ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭೌತವಿಜ್ಞಾನ ಕ್ಷೇತ್ರದಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ಸಹಯೋಗಕ್ಕೆ ರೋಹಿಣಿ ಅಪಾರ ಕೊಡುಗೆ ನೀಡಿದ್ದರು. ಅಲ್ಲದೆ, ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ನೀಡಿದ ಅನನ್ಯ ಪ್ರೋತ್ಸಾಹವನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

‘ಈ ಪ್ರಶಸ್ತಿಗೆ ಭಾಜನಳಾಗಿರುವುದು ಅಚ್ಚರಿ ತಂದಿದೆ. ನಮ್ಮಲ್ಲಿ ಪದ್ಮ ಪುರಸ್ಕಾರಗಳಿಗೆ ಸಮಾನವಾಗಿರುವ ಪ್ರಶಸ್ತಿಯಾಗಿದೆ. ಎರಡೂ ದೇಶಗಳ ವಿಜ್ಞಾನ ಕ್ಷೇತ್ರ ಹಿಂದಿನಿಂದಲೂ ಕೆಲಸ ಮಾಡುತ್ತಲೇ ಬಂದಿದ್ದೇನೆ’ ಎಂದು ರೋಹಿಣಿ ಪ್ರತಿಕ್ರಿಯಿಸಿದ್ದಾರೆ.

ಗೋಡ್ಬೋಲೆ 1952 ರಲ್ಲಿ ಪುಣೆಯಲ್ಲಿ ಜನಿಸಿದರು. ಪುಣೆ ವಿಶ್ವವಿದ್ಯಾಲಯದಲ್ಲಿ ಭೌತ ವಿಜ್ಞಾನದಲ್ಲಿ ಬಿಎಸ್ಸಿ ಪದವಿ, ಐಐಟಿ ಬಾಂಬೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅಮೆರಿಕದ ಸ್ಟೋನಿ ಬ್ರೂಕ್ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮಾಡಿದರು. ಕಳೆದ ಕೆಲ ದಶಕಗಳಿಂದ ಐಐಎಸ್ಸಿಯಲ್ಲಿ ಪ್ರಾಧ್ಯಾಪಕರಾಗಿದ್ದು, ಬೆಂಗಳೂರಿನಲ್ಲೇ ನೆಲೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.