ಬೆಂಗಳೂರು: ‘ಕೋವಿಡ್ ಪೀಡಿತರಿಗೆ ಚಿಕಿತ್ಸೆ ಒದಗಿಸಲು ದೆಹಲಿ, ತಮಿಳುನಾಡಿನಲ್ಲಿ ಭಾರತೀಯ ಸೇನೆಯು ತುರ್ತಾಗಿ ಆಸ್ಪತ್ರೆ ಪ್ರಾರಂಭಿಸಿದಂತೆ ಬೆಂಗಳೂರಿನಲ್ಲಿಯೂ ವೈದ್ಯಕೀಯ ಸೇವೆಗೆ ಆಸ್ಪತ್ರೆಯನ್ನು ಅಣಿಗೊಳಿಸಬೇಕು’ ಎಂದು ಸಂಸದ ಪಿ.ಸಿ. ಮೋಹನ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ಪತ್ರ ಬರೆದಿದ್ದಾರೆ. ‘ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿರುವ ಕಾರಣ ಒಂದು ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ಸೇನೆಯು ದೆಹಲಿಯಲ್ಲಿ ಪ್ರಾರಂಭಿಸಿದೆ. ಅದೇ ರೀತಿ, ತಮಿಳುನಾಡಿನಲ್ಲಿ ಕೂಡ ನಿರ್ಮಿಸಿದೆ. ಇದೇ ರೀತಿ ಕರ್ನಾಟಕದಲ್ಲಿ ಕೂಡ ಕೋವಿಡ್ ಚಿಕಿತ್ಸೆಗೆ ಕೇಂದ್ರ ನಿರ್ಮಿಸಬೇಕು. ಬೆಂಗಳೂರಿನಲ್ಲಿ ಕೂಡ ಕಮಾಂಡ್ ಆಸ್ಪತ್ರೆ ಸೇರಿದಂತೆ ಅನೇಕ ರಕ್ಷಣಾ ಸಂಸ್ಥೆಗಳಿವೆ. ಇಲ್ಲಿಯೂ ಕೋವಿಡ್ ಪೀಡಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.