ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ವೃಂದಕ್ಕೆ ಸೇರಿಸುವ ತಿದ್ದುಪಡಿ ನಿಯಮಗಳ ಕರಡನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬುಧವಾರ ಪ್ರಕಟಿಸಿದೆ. 1,500 ಪಿಡಿಒಗಳಿಗೆ ಹಿರಿಯ ಪಿಡಿಒಗಳಾಗಿ ಬಡ್ತಿ ನೀಡುವುದಕ್ಕೂ ಹೊಸ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪಿಡಿಒ ಹುದ್ದೆ ಜಿಲ್ಲಾ ಮಟ್ಟದ ವೃಂದಕ್ಕೆ ಸೀಮಿತವಾಗಿತ್ತು. ಅದನ್ನು ರಾಜ್ಯ ವೃಂದಕ್ಕೆ ಸೇರಿಸಬೇಕೆಂಬ ಬೇಡಿಕೆ ಬಹಳ ದಿನಗಳಿಂದಲೂ ಇತ್ತು. ಅದಕ್ಕೆ ಪೂರಕವಾಗಿ ಕರ್ನಾಟಕ ಸಾಮಾನ್ಯ ಸೇವೆಗಳು (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು–2024 ಅನ್ನು ರೂಪಿಸಲಾಗಿದೆ.

ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪೈಕಿ ಹಿರಿಯ ಪಿಡಿಒ ಹಾಗೂ ಪಿಡಿಒಗಳನ್ನು ರಾಜ್ಯ ವೃಂದಕ್ಕೆ ಸೇರಿಸಲಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್–1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್–2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಜಿಲ್ಲಾ ವೃಂದ ಎಂಬುದಾಗಿ ಪರಿಗಣಿಸಲಾಗಿದೆ. ಹಿರಿಯ ಪಿಡಿಒ ಹಾಗೂ ಪಿಡಿಒಗಳನ್ನು ರಾಜ್ಯ ವೃಂದದ ಪಟ್ಟಿಯಲ್ಲಿ ‘ಪತ್ರಾಂಕಿತ ವ್ಯವಸ್ಥಾಪಕ’ರ (ಗೆಜೆಟೆಡ್ ಮ್ಯಾನೇಜರ್) ಹುದ್ದೆಯ ನಂತರದಲ್ಲಿ ಸೃಜಿಸಲಾಗಿದೆ.

ಪಿಡಿಒಗಳ ಪೈಕಿ 1,500 ಮಂದಿಗೆ ಬಡ್ತಿ ಮೂಲಕ ಹಿರಿಯ ಪಿಡಿಒ ಹುದ್ದೆ ನೀಡಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 4,454 ಪಿಡಿಒ ಹುದ್ದೆಗಳು ಇರಲಿವೆ. ಈ ಪೈಕಿ ಶೇಕಡ 65ರಷ್ಟನ್ನು ನೇರ ನೇಮಕಾತಿ ಮೂಲಕ ಹಾಗೂ ಉಳಿದ ಶೇ 35ರಷ್ಟನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್–1 ಹಾಗೂ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್–1 ವೃಂದದ ನೌಕರರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಬೇಕು.

2,127 ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್–1 ಹುದ್ದೆಗಳು ಇರಲಿವೆ. ಅವುಗಳಲ್ಲಿ ಶೇ 50ರಷ್ಟನ್ನು ನೇರ ನೇಮಕಾತಿ ಮೂಲಕ ಮತ್ತು ಶೇ 50ರಷ್ಟನ್ನು ಬಡ್ತಿ ಮೂಲಕ ಭರ್ತಿ ಮಾಡಲು ನಿಯಮಗಳಲ್ಲಿ ಅವಕಾಶ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.