ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲಿಸಲು ಕೋರಿ ಮನವಿ

Published 29 ಜೂನ್ 2024, 15:22 IST
Last Updated 29 ಜೂನ್ 2024, 15:22 IST
ಅಕ್ಷರ ಗಾತ್ರ

ಬೆಂಗಳೂರು: "ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು ಹೆಚ್ಚಿನ‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಿರ್ದೇಶಿಸಬೇಕು" ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಗರಣದ ನಾಲ್ಕನೇ ಆರೋಪದ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯವಾದ ಕಾರಣ ಶನಿವಾರ ಅವರನ್ನು, "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು.

ಈ ವೇಳೆ ಪ್ರಜ್ವಲ್ ಪರ ವಕೀಲ ಜಿ.ಅರುಣ್ ಅವರ ಮನವಿಯನ್ನು ನ್ಯಾಯಾಧೀಶರು ಆಲಿಸಿದರು. "ನಿಮ್ಮ ಈ ಮನವಿಯನ್ನು ಜೈಲು ಅಧಿಕಾರಿಗಳಿಗೆ ನೀಡಿ. ಅವರು ಅವಕಾಶ ನೀಡದೇ ಇದ್ದಲ್ಲಿ ವಿಚಾರಣೆ ನಡೆಸೋಣ" ಎಂದು ಸೂಚಿಸಿದರು.

ಪ್ರಜ್ವಲ್ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ವಿಚಾರಣೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT