ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಒಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ಒಮ್ನಿ ವಾಹನದಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆಯೇ ಅವರೆಲ್ಲರೂ ತಮ್ಮೂರಿಗೆ ಮರಳಿದ್ದಾರೆ.
.ಶಿವಮೊಗ್ಗ ಕೋಮು ಗಲಭೆಗೆ ಸಿದ್ದರಾಮಯ್ಯ, ಪರಮೇಶ್ವರ ಕುಮ್ಮಕ್ಕು: ಶೋಭಾ ಕರಂದ್ಲಾಜೆ.ಶಿವಮೊಗ್ಗ ಹಿಂಸಾಚಾರ: 24 ಪ್ರಕರಣ ದಾಖಲು, 60 ಮಂದಿ ಬಂಧನ.
ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ವಾಹನಗಳ ಪತ್ತೆ ಮಾಡಿ ಪರಿಶೀಲನೆ ವೇಳೆ ಅವರು ನ್ಯಾಮತಿಯವರು ಎಂದು ತಿಳಿದುಬಂದಿದೆ. ಈ ವಿಚಾರದಲ್ಲಿ ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್ಪಿ ಮನವಿ ಮಾಡಿದ್ದಾರೆ.

ರಾಗಿಗುಡ್ಡಕ್ಕೆ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ ಎಂದು ಸೋಮವಾರ ಬಿಜೆಪಿ ಮುಖಂಡರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದನ್ನು ಸ್ಮರಿಸಿದರು.
.ಶಿವಮೊಗ್ಗ ಗಲಭೆಗೆ ಸರ್ಕಾರದ ತುಷ್ಟೀಕರಣ ನೀತಿಯೇ ಕಾರಣ: ಬಿಜೆಪಿ ನಾಯಕರ ಕಿಡಿ.ಶಿವಮೊಗ್ಗ ಕೋಮು ಗಲಬೆಗೆ ಬೇರೆ ಕಾರಣಗಳೂ ಇರಬಹುದಲ್ಲ.. ಸತೀಶ ಜಾರಕಿಹೊಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.